ಮಂಗಳೂರಲ್ಲಿ ಮುಗಿಯದ ಅಪಘಾತ!!
ಪುತ್ತೂರು: KSRTC ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಮೃತ್ಯು
– ಮಂಗಳೂರು: ರಿಕ್ಷಾ-ಕಾರ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ!
– ಕಾರ್ಕಳ: ಬೈಕ್ ಪಿಕಪ್ ಡಿಕ್ಕಿ, ಸವಾರರಿಬ್ಬರಿಗೆ ಗಾಯ
NAMMUR EXPRESS NEWS
ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಡೂರು ಗ್ರಾಮದ ಕಾವು ಸಮೀಪದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ನಿವಾಸಿ ಮೋಯ್ದಿನ್‌ಕುಂಞ ಅವರ ಪುತ್ರ ಅಶ್ರಫ್ (25) ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ನಾಪೊಕ್ಲುವಿನಲ್ಲಿ ಎಲೆಕ್ಟ್ರಿಕಲ್ ಅಂಗಡಿ ಹೊಂದಿರುವ ಅಶ್ರಫ್ ಅವರು ಮನೆಗೆ ಬಂದಿದ್ದರು. ನಾಪೊಕ್ಲುವಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.
ಅಶ್ರಫ್ ಅವರು ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದಾಗ ಕೊಟ್ಯಾಡಿಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಬಸ್ ವಾಹನವೊಂದನ್ನು ಹಿಂದಿಕ್ಕುವಾಗ ಬೈಕ್‌ಗೆ ಡಿಕ್ಕಿಯಾಗಿದೆ. ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಮಂಗಳೂರು: ರಿಕ್ಷಾ-ಕಾರ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ!
ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ 10ನೇ ತೋಕೂರು ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಏ. 30 (ಇಂದು) ನಡೆದಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆಟೊ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ರಿಕ್ಷಾ ಉಡುಪಿ ಕಡೆಯಿಂದ ಹಳೆಯಂಗಡಿ ಮಾರ್ಗವಾಗಿ ಕಿನ್ನಿಗೋಳಿ ಕಡೆ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರ್ ಡಿಕ್ಕಿ ಹೊಡೆದಿದೆ.
– ಕಾರ್ಕಳ: ಬೈಕ್ ಪಿಕಪ್ ಡಿಕ್ಕಿ, ಸವಾರರಿಬ್ಬರಿಗೆ ಗಾಯ
ಕಾರ್ಕಳ: ಬೈಕ್‌ಗೆ ಪಿಕಪ್ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಆನೆಕೆರೆಯಲ್ಲಿ ಏ. 28ರಂದು ಸಂಭವಿಸಿದೆ.
ಸಾಣೂರಿನ ಸುಶಾಂತ್ ಬೈಕಿನಲ್ಲಿ ತಮ್ಮ ಪ್ರಶಾಂತ್ ಎಂಬುವವರನ್ನು ಸಹ ಸವಾರರನ್ನಾಗಿ ಕುಳ್ಳಿರಿಸಿಕೊಂಡು ಕಸಬಾ ಗ್ರಾಮದ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿರುವಾಗ, ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಇಬ್ಬರೂ ಬೈಕ್ ಸಮೇತ ನೆಲಕ್ಕೆ ಬಿದ್ದು ಗಾಯಗೊಂಡಿದ್ದು, ಗಾಯಳುಗಳು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಅಪಘಾತಕ್ಕೆ ಕಾರಣನಾದ ಪಿಕಪ್ ಗೂಡ್ಸ್ ವಾಹನ ಚಾಲಕನು ವಾಹನವನ್ನು ನಿಲ್ಲಿಸದೆ ಓಡಿಹೋಗಿರುತ್ತಾನೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸುಶಾಂತ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.