- ಮಂಡ್ಯ ಜಿಲ್ಲೆಯ ಲಿಂಗಪಟ್ಟಣದಲ್ಲಿ ಘಟನೆ
ಮಳವಳ್ಳಿ: ಚಾಮರಾಜ ನಗರದ ದೇವಾಲಯವೊಂದರಲ್ಲಿ ಪ್ರಸಾದ ತಿಂದು ಭಕ್ತರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯ ಲಿಂಗಪಟ್ಟಣ ಗ್ರಾಮದ ಮಾರಮ್ಮ ದೇವಸ್ಥಾನವೊಂದರಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ.
ದೇವಾಲಯದಲ್ಲಿ ಪ್ರಸಾದ ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 70ಕ್ಕೂ ಹೆಚ್ಚು ಭಕ್ತಾಧಿಗಳು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ನಡೆದಿದೆ. ಪ್ರಸಾದ ಸೇವಿಸಿದ ಭಕ್ತಾಧಿಗಳು ವಾಂತಿ ಮಾಡಿಕೊಂಡು ಅಸ್ವಸ್ತಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತಾಧಿಗಳನ್ನು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಳವಳ್ಳಿ ಲಿಂಗಪಟ್ಟಣ ಗ್ರಾಮದ ನಡುವೆ ಇರುವ ಮಾರಮ್ಮನ ದೇವಸ್ಥಾನದಲ್ಲಿ ಪ್ರತೀ ಮಂಗಳವಾರ ವಿಶೇಷ ಪೂಜೆ ನಡೆಯುತ್ತದೆ. ಪೂಜೆ ನಂತರ ಪೆÇಂಗಲ್ ಹಾಗೂ ಪುಳಿಯೋಗರೆಯನ್ನು ಪ್ರಸಾದ ರೂಪದಲ್ಲಿ ನೀಡುತ್ತಾರೆ. ಬುಧವಾರ ಸಹ ಇದೇ ರೀತಿ ಪ್ರಸಾದ ವಿತರಿಸಿದ್ದು ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.