ರಾಜ್ಯದ ರೈತರಿಗೆ ಗುಡ್ ನ್ಯೂಸ್..!
– ಬಿಡುಗಡೆಯಾಗುತ್ತಿದೆ ಬರ ಪರಿಹಾರದ ಮೊದಲ ಕಂತು!
– ವಾರದಲ್ಲೇ ಮೊದಲ ಕಂತಿನ ಬಿಡುಗಡೆ ; ಸಿಎಂ ಸಿದ್ದರಾಮಯ್ಯ ಘೋಷಣೆ
NAMMUR EXPRESS NEWS
ಮೈಸೂರು: ರಾಜ್ಯದ ರೈತರು ಬರ ಪರಿಹಾರ ಯಾವಾಗ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪರಿಹಾರ- ಪ್ರಧಾನಿಗಳ ಗಮನಕ್ಕೆ ತರಲಾಗಿದೆ: ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು.
ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಅವರಿಗೆ ನೆನಪು ಮಾಡಿದ್ದೇನೆ ಎಂದರು. ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ: ಇಂದಿನವರೆಗೆ ನಮ್ಮ ಸರ್ಕಾರ ದನಕರುಗಳಿಗೆ ಹಾಗೂ ಜನಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಭಾಯಿಸಿದ್ದೇವೆ. 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುವುದು ಎಂದರು.