Categories
ಮೈಸೂರು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ.!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ.!
– 16 ದಿನದಲ್ಲಿ 12 ಸಾವಿರ ಕೇಸ್
– ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ

NAMMUR EXPRESS NEWS
ಬೆಂಗಳೂರು: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದ ವಾಹನ ಸವಾರರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಸೀಟ್ ಬೆಲ್ಟ್‌ ಧರಿಸದೇ ಕಾರು ಚಲಾಯಿಸಿದ ಸವಾರರ ಮೇಲೆ ಕೇಸ್ ದಾಖಲಿಸಲಾಗಿದ್ದು ಕೇವಲ 16 ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಕೇಸ್​ಗಳು ದಾಖಲಾಗಿವೆ. ಮೇ 1 ರಿಂದ ಮೇ 16ರ ವರೆಗೆ ಹೆದ್ದಾರಿ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ 12,192 ಕೇಸ್​ಗಳನ್ನು ದಾಖಲಿಸಲಾಗಿದೆ. ಕಾರು ಚಾಲಕ ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡಿರುವುದು ಹಾಗೂ ಪಕ್ಕದಲ್ಲಿ ಕುಳಿತಿರುವ ವ್ಯಕ್ತಿ ಕೂಡ ಸೀಟ್ ಬೆಲ್ಟ್ ಧರಿಸದೇ ಪ್ರಯಾಣ ಮಾಡುವುದು ಹೀಗೆ ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡಿದಕ್ಕೆ ಕೇಸ್ ಹಾಕಲಾಗಿದೆ. ಕೇಸ್ ದಾಖಲಿಸಿ ಕಾರು ಮಾಲೀಕನ ವಿಳಾಸಕ್ಕೆ ನೋಟಿಸ್ ಕಳಿಸಲಾಗಿದೆ. ನೋಟಿಸ್ ಮಾಡಿದ ಏಳು ದಿನದಲ್ಲಿ ಸಂಚಾರಿ ಠಾಣೆಗೆ ಹೋಗಿ ದಂಡ ಪಾವತಿಗೆ ಸೂಚನೆ ನೀಡಲಾಗಿದ್ದು ದಂಡ ಕಟ್ಟದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ:

ಧಾರಕಾರವಾಗಿ ಸುರಿದ ಮಳೆಗೆ ಬೆಂಗಳೂರು – ಮೈಸೂರು ಹೆದ್ದಾರಿ ಜಲಾವೃತಗೊಂಡು ಕೆಲ ಕಾಲ ವಾಹನ ಸವಾರರು ಪರದಾಡುವಂತಾಗಿತ್ತು. ಪಟ್ಟಣದ ಅಗ್ನಿಶಾಮಕ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್‌ಗಳಲ್ಲಿ ಹೆಚ್ಚು ಮಣ್ಣು ತುಂಬಿಕೊಂಡಿದೆ. ಜೊತೆಗೆ ತ್ಯಾಜ್ಯ ಕಟ್ಟಿಕೊಂಡು ಒಳಚರಂಡಿಗಳಿಗೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ಹೆದ್ದಾರಿಯಲ್ಲಿ ಮಳೆ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಕೆಲ ಕಾಲ ಪರದಾಡುವಂತಾಯಿತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.