ಮೈಸೂರು ಚಲೋ ಪಾದಯಾತ್ರೆಯಲ್ಲಿ ಜೀವರಾಜ್
– ಸಿದ್ದರಾಮಯ್ಯ ರಾಜೀನಾಮೆಗೆ ಜೀವರಾಜ್ ಪಟ್ಟು
– ಚಿಕ್ಕಮಗಳೂರು ಜಿಲ್ಲೆಯಿಂದ ಸಾವಿರಾರು ಜನ
NAMMUR EXPRESS NEWS
ಎನ್ ಆರ್ ಪುರ: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಶೃಂಗೇರಿ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಶಾಸಕರಾದ ಡಿ.ಎನ್ ಜೀವರಾಜ್ರವರು ಪಾಲ್ಗೊಂಡು ಬಿಜೆಪಿ ಜೆಡಿಎಸ್ ನಾಯಕರೊಡನೆ ಹೆಜ್ಜೆ ಹಾಕಿದ್ದಾರೆ.
ಆಗಸ್ಟ್ 3ರಿಂದ ಬೆಂಗಳೂರಿನಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡ ಜೀವರಾಜ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ನಮ್ಮೂರ್ ಎಕ್ಸ್ ಪ್ರೆಸ್ ಮಾಧ್ಯಮದ ಜತೆ ಮಾತನಾಡಿದ ಅವರು, ಜನರಿಗೆ ಬಿಟ್ಟಿ ಗ್ಯಾರಂಟಿಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದು ಕೆಲವೇ ದಿನಗಳಲ್ಲಿ ಭ್ರಷ್ಟಾಚಾರ ಮಾಡಿ,ಜನರಿಗೆ ನೀಡಿದ ಭರವಸೆಯನ್ನೂ ಈಡೇರಿಸದೆ, ಜನರ ಹಣವನ್ನು ಲೂಟಿ ಮಾಡಿ ರಾಜ್ಯದ ಜನತೆಗೆ ಮೊಸ ಮಾಡಿದ್ದಾರೆ. ಮೂರು ದಿನಗಳಿಂದಲೂ ಪಾದಯಾತ್ರೆಗೆ ಸಿಗುತ್ತಿರುವ ಜನ ಬೆಂಬಲ ಮತ್ತು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಂದು ಭಾಗವಹಿಸುತ್ತಿರುವ ಕಾರ್ಯಕರ್ತರ ಹುಮ್ಮಸ್ಸನ್ನು ನೋಡಿದರೆ ಇಡೀ ರಾಜ್ಯದ ಜನತೆಗೆ ಕಾಂಗ್ರೇಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತಿಳಿದಿದೆ ಎಂದಿದ್ದಾರೆ.
ಸಿದ್ದರಾಮ್ಯನವರಿಗೆ ಪೂರ್ಣ ಬಹುಮತದ ಸರ್ಕಾರಕ್ಕೆ ಜನ ಅವಕಾಶ ನೀಡಿದ್ದರೂ ಯಾಕೆ ಇಂತಹ ಹಗರಣಗಳ ಮೂಲಕ ಸರ್ಕಾರ ನಡೆಸಬೇಕಾಯ್ತೋ ಗೊತ್ತಿಲ್ಲ. ಈಗ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರೇ ಕೇಳಿ ಬಂದಿರುವುದರಿಂದ ತಕ್ಷಣ ತಮ್ಮ ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆರೋಪ ಮುಕ್ತರಾಗಿ ಬಂದರೆ ಮತ್ತೆ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.