- ಪಂಚಲಿಂಗ ದರ್ಶನ 1000 ಜನರಿಗೆ ಮಾತ್ರ!
ಚಾಮರಾಜನಗರ/ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೈಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರು ಮಾದಪ್ಪನ ದರ್ಶನ ಪಡೆದಿದ್ದಾರೆ. ಚಾ.ನಗರಕ್ಕೆ ಭೇಟಿ ನೀಡಿದರೆ ಖುರ್ಚಿ ಹೋಗುತ್ತೆ ಎಂಬ ಅಪಶಕುನದ ವಿರುದ್ಧ ಈ ಭೇಟಿ ಮಹತ್ವ ಪಡೆದಿದೆ. ಆದರೇ ದೇವಸ್ಥಾನದ ಪ್ರಸಾದ ಸ್ವೀಕರಿಸಲಿಲ್ಲ ಎನ್ನಲಾಗಿದೆ.
ಮಾದಪ್ಪನ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು,ಪಕ್ಷದ ಹೈಕಮಾಂಡ್ ಆದೇಶ ಬಂದ ಬಳಿಕವಷ್ಟೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಸಂಸದ ಶ್ರೀನಿವಾಸ್ ಪ್ರಸಾದ್ ಬೇಸರದ ಬಗ್ಗೆ ಅವರನ್ನ ಕರೆದು ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದರು.
ಪಂಚಲಿಂಗ ದರ್ಶನ 1000 ಜನರಿಗೆ ಮಾತ್ರ!: ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ತಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಂಚಲಿಂಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ ಎಂಬ ಮಾತು ಸಭೆಯಲ್ಲಿ ಕೇಳಿ ಬಂತು.