Categories
ಮೈಸೂರು

ಮೈಸೂರು ಟಾಪ್ 3 ನ್ಯೂಸ್..!

ಮೈಸೂರು ಟಾಪ್ 3 ನ್ಯೂಸ್..!
– ಬೈಕ್ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು.!
– ಕಾರು-ಸ್ಕೂಟರ್ ಅಪಘಾತ; ಮಹಿಳೆ ಸಾವು!
– ಪಿಡಿಓ ಮೇಲೆ ಗ್ರಾ.ಪಂ. ಅಧ್ಯಕ್ಷೆ ಪತಿಯಿಂದ ಹಲ್ಲೆ ಆರೋಪ

NAMMUR EXPRESS NEWS
ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಬೈಕ್‌ಗಳ ನಡುವೆ ಅಪಘಾತ ನಡೆದಿದ್ದು, ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಹುಣಸೂರು ತಾಲೂಕಿನ ಮರೂರುಕಾವಲ್‌ ಗ್ರಾಮದ ನಿವಾಸಿ ಸಾಗರ್ (35) ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹರೀಶ್‌ನನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಅವರು ತೀವ್ರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕಾರು-ಸ್ಕೂಟರ್ ಅಪಘಾತ; ಮಹಿಳೆ ಸಾವು!

ಮೈಸೂರು: ಕಾರು- ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಮೃತ ದುರ್ದೈವಿ. ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಡಿಓ ಮೇಲೆ ಗ್ರಾ.ಪಂ. ಅಧ್ಯಕ್ಷೆ ಪತಿಯಿಂದ ಹಲ್ಲೆ ಆರೋಪ:

ಮೈಸೂರು: ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪತಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಪಿಡಿಒ ಮಂಜುನಾಥ್‌ ಮೇಲೆ ಗ್ರಾ.ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣಗೌಡ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ವಿಡಿಯೋ ವೈರಲ್ ಆಗಿದೆ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.