Categories
ಮೈಸೂರು ರಾಜ್ಯ

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
– ಮುಂದಿನ ವರ್ಷದಿಂದ ಸೈಕಲ್ ವಿತರಣೆ

NAMMUR EXPRESS NEWS
ಮೈಸೂರು : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು. ಶಾಲೆ ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ಸೈಕಲ್ ವಿತರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯದಲ್ಲೇ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹೆಚ್ಚುವರಿಯಾಗಿ 2 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಗಮನಹರಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.