ಹೊಸ ವರ್ಷಕ್ಕೆ ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಹಣ?!
– ಡಿಸೆಂಬರ್ ಅಥವಾ ಜನವರಿಯಲ್ಲಿ ಯೋಜನೆ ಜಾರಿ
– ಯುವನಿಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
NAMMUR EXPRESS NEWS
ಮೈಸೂರು: ಹೊಸ ವರ್ಷಕ್ಕೆ ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಯುವ ನಿಧಿ ಹಣ ಜಮೆ ಆಗಲಿದೆಯಾ? ಹೌದು. ಎನ್ನುತ್ತಿವೆ ಸರ್ಕಾರದ ಮೂಲಗಳು. ಡಿಸೆಂಬರ್ ಅಥವಾ ಜನವರಿಯಲ್ಲಿ ಯೋಜನೆ ಜಾರಿಯಾಗಲಿದೆ. ಹಾಗಾದ್ರೆ ಯುವನಿಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು. ಇಲ್ಲಿದೆ ಮಾಹಿತಿ. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ
HOW TO APPLY : NEET-UG COUNSELLING 2023