- ಜಂಬೂ ಸವಾರಿಗೆ ಸಾಂಸ್ಕøತಿಕ ನಗರಿ ಸಜ್ಜು
- ಮೈಸೂರು ಸೇರಿ ಎಲ್ಲೆಡೆ ಆಯುಧ ಪೂಜೆ
ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯನ್ನು ಭಾನುವಾರ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದ್ದು, ಸೋಮವಾರದ ದಸರಾ ಮೇಲೆ ಇಡೀ ನಾಡಿನ ಕಣ್ಣು ಇದೆ.
ಕರೋನಾ ಹಿನ್ನೆಲೆ ಸರಳ ದಸರಾ ಆಚರಣೆ ಮಾಡಲಿದ್ದು, ಇಷ್ಟು ವರ್ಷದಂತೆ ರಂಗು ಇರಲ್ಲ. ಭಾನುವಾರ ಮುಂಜಾನೆ ಅರಮನೆಯ ಆಯುಧಗಳನ್ನು ರಥ ವಾಹನದಲ್ಲಿ ಆನೆ, ಕುದುರೆ, ಒಂಟೆ ಮತ್ತು ಹಸುವಿನೊಡನೆ ಸೋಮೇಶ್ವರ ದೇವಾಲಯಕ್ಕೆ ತರಲಾಯಿತು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ರಾಜ ಮಹಾರಾಜರು ಬಳಸುತ್ತಿದ್ದ ಯುದ್ಧ ಸಾಮಗ್ರಿಗಳು, ಕಾರುಗಳು ಸೇರಿದಂತೆ ಆನೆ, ಕುದುರೆ, ಒಂಟೆ, ಹಸುವಿಗೂ ಪೂಜೆ ಸಲ್ಲಿಸಿದರು. ಮಂಗಳವಾದ್ಯ ಹಾಗೂ ಪೆÇಲೀಸ್ ಬ್ಯಾಂಡ್ ಸಂಗೀತದ ಹಿಮ್ಮೇಳದಲ್ಲಿ ಯದುವೀರ್ ಅವರು ಆಯುಧ ಪೂಜೆ ನೆರವೇರಿಸಿದರು. ಜನರಿಗೆ ಎದುರಾಗಿರುವ ಕೊರೋನಾ ಸಂಕಷ್ಟದಿಂದ ಮುಕ್ತ ಮಾಡಿ ಸುಖ, ಸಮೃದ್ಧಿ ನೆಲೆಸಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಮೈಸೂರು:
ದಸರಾಕ್ಕೆ ಸಜ್ಜು!: ವಿಶ್ವವಿಖ್ಯಾತ ಮೈಸೂರು ದಸರ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂ ಸವಾರಿಗೆ ಸಾಂಸ್ಕøತಿಕ ನಗರಿ ಸಜ್ಜಾಗಿದೆ.
ದಸರಾ ಮಹೋತ್ಸವದ ಮುಖ್ಯ ಭಾಗವಾದ ಜಂಬೂ ಸವಾರಿ ಈ ಬಾರಿ ಅತ್ಯಂತ ಸರಳವಾಗಿ ನಡೆಯಲಿದೆ. ಅಂಬಾರಿ ಹೊರುವ ಅಭಿಮನ್ಯುವಿಗೆ ಸುಮಾರು 750 ಕೆಜಿ ತೂಕದ ಮರಳಿನ ಮೂಟೆ ಹೇರಿ ತಾಲೀಮು ನಡೆಸಲಾಯಿತು. ಈ ವೇಳೆ ಅಶ್ವದಳಗಳು ಅಭಿಮನ್ಯುವಿನ ಹಿಂದೆ ಹೆಜ್ಜೆ ಹಾಕಿದವು. ಸೋಮವಾರ ಅಭಿಮನ್ಯು 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊರಲಿದ್ದಾನೆ. ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಅರ್ಧಗಂಟೆಯಲ್ಲಿ ಕಾರ್ಯಕ್ರಮ ಮುಕ್ತಾಯವಾಗಲಿದೆ. 300 ಮಂದಿ ಮಾತ್ರ ಕಾರ್ಯಕ್ರಮಕ್ಕೆ ನೇರ ಸಾಕ್ಷಿಯಾಗಲಿದ್ದಾರೆ.
ಸಾರ್ವಜನಿಕರಿಗೆ ಪ್ರವೇಶ ನಿಬರ್ಂಧಿಸಲಾಗಿದ್ದು, ಜನ ಸಂದಣಿ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ವೀಕ್ಷಣೆಗಾಗಿ ಎಲ್.ಇ.ಡಿ ಟಿ.ವಿ. ಪರದೆಗಳನ್ನು ಅಳವಡಿಸಲಾಗಿದೆ. ದೂರದರ್ಶನ ಚಂದನಾಹಿನಿ ಮೂಲಕ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಂಬೂ ಸವಾರಿಗೆ ಉತ್ತಮವಾಗಿ ತಾಲೀಮು ನಡೆದಿದೆ. ಎಲ್ಲ ಆನೆಗಳೂ ಆರೋಗ್ಯವಾಗಿವೆ. ಯಾವುದೇ ಸಮಸ್ಯೆ ಇಲ್ಲ. ಜಂಬೂ ಸವಾರಿ ಅತ್ಯಂತ ಯಶಸ್ವಿಯಾಗಿ ನೆರವೇರಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆಯುಧ ಪೂಜೆ, ದಸರಾ: ಮೈಸೂರು ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಲ್ಲೂ ಆಯುಧ ಪೂಜೆ, ದಸರಾ ಸಂಭ್ರಮ ಕಾಣುತ್ತಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತುಇದೆ. ಸರಳಾ ದಸರಾ ನಡೆಯಲಿದೆ. ಭಾನುವಾರ ಆಯುಧ, ಅಂಗಡಿ, ವಾಹನಗಳಿಗೆ ಪೂಜೆ ಮಾಡಲಾಯಿತು.