- ರಾಜಸ್ಥಾನದ ದೌಸಾದಲ್ಲಿ ನಡೆದ ಘಟನೆ
- ನಾಲ್ವರು ಸಾವು ಕಂಡಿರುವ ಶಂಕೆ
ನವದೆಹಲಿ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಆಹಾರ ಸೇವನೆ ಮಾಡಿದ ನಂತರದಲ್ಲಿ ಸುಮಾರು 300ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ದೌಸಾದ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಸುಭಾಷ್ ಬಿಲೋನಿಯಾ ತಿಳಿಸಿದ್ದಾರೆ.
ರಾಜಸ್ಥಾನದ ಪಖರ್ ಗ್ರಾಮದಲ್ಲಿ ರಾತ್ರಿ ಮಂದಾವ ಪ್ರದೇಶದಲ್ಲಿ ಧಾರ್ಮಿಕ ಸಮಾರಂಭವೊಂದು ನಡೆದಿದೆ. ಧಾರ್ಮಿಕ ಕಾರ್ಯದ ನಂತರ ಎಲ್ಲರೂ ಊಟ ಮಾಡಿದ್ದಾರೆ. ಈ ಪೈಕಿ 300 ಜನರಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಮಾಂದವಾರ, ಮಹುವಾ, ದೌಸಾ ಮತ್ತು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಅಲ್ಲದೇ ಹಲವರು ಪ್ರಥಮ ಚಿಕಿತ್ಸೆ ಪಡೆದು ಬಿಡುಗಡೆಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಹರ್ಷಿತ್ ಗೋಸಾವಿ ಅವರ ಪ್ರಕಾರ ಸಮಾರಂಭದಲ್ಲಿ ಸುಮಾರು 50 ಜನರು ಭಾಗವಹಿಸಿದ್ದರು. ಇದಲ್ಲದೆ, ನಾಲ್ವರು ಅಸ್ವಸ್ಥರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿಯನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದರು. ಆಸ್ಪತ್ರೆಗೆ ದಾಖಲಾಗಿರುವ ಒಂಬತ್ತು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.