ಅಮಿತ್ ಶಾ ಭೇಟಿಯಾದ ಬಿ.ವೈ. ವಿಜಯೇಂದ್ರ!
– ಬಿಜೆಪಿ ಸಂಘಟನೆ, ವಿವಿಧ ತಂತ್ರಗಾರಿಕೆ ಬಗ್ಗೆ ಚರ್ಚೆ
– ರಾಜ್ಯ ರಾಜಕೀಯದಲ್ಲಿ ನಡೆಯುತ್ತಾ ಮ್ಯಾಜಿಕ್?
NAMMUR EXPRESS NEWS
ನವ ದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ಅದರೆ ರಾಜ್ಯದಲ್ಲಿ ಮುಂದಿನ ರಾಜಕೀಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಸದಿಲ್ಲಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ಮತ್ತೆ ಸೇರಿದ ಅಮಿತ್ ಶಾ ಅಭಿನಂದಿಸಿದ ರಾಜ್ಯಾಧ್ಯಕ್ಷ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಕರ್ನಾಟಕದ ಫಲಿತಾಂಶ ಕುರಿತು ಸಮಾಲೋಚನೆ ನಡೆದಿದೆ ಎನ್ನಲಾಗಿದೆ. ರಾಜ್ಯದ ರಾಜಕೀಯ ಸ್ಥಿತಿ ಮತ್ತು ಕಾಂಗ್ರೆಸ್ ಸರ್ಕಾರ ಎದುರಿಸಲು ಮಾಡಬೇಕಾದ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಮಾತುಕತೆಯ ಪೂರ್ಣ ವಿವರ ಲಭ್ಯವಾಗಿಲ್ಲವಾದರೂ ವಿಜಯೇಂದ್ರರವರಿಗೆ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.