ವಿಶ್ವ ಸುಂದರಿ ಸ್ಪರ್ಧೆಗೆ ಕರಾವಳಿಯ ಸಿನಿ ಶೆಟ್ಟಿ!
– ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಡುಪಿಯ ಹುಡುಗಿ
– 130 ದೇಶಗಳ ರೂಪದರ್ಶಿಯರು ಹಾಜರ್
– ಏನಿದು ಸ್ಪರ್ಧೆ… ಯಾರು ಯಾರು ಭಾಗವಹಿಸುತ್ತಾರೆ?
NAMMUR EXPRESS NEWS
ಸುಮಾರು 27 ವರ್ಷಗಳ ಬಳಿಕ ದೇಶದಲ್ಲಿ ಮಿಸ್ ಇಂಟರ್ ನ್ಯಾಷನಲ್ ಸ್ಪರ್ಧೆ ನಡೆಯಲಿದ್ದು ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಲ್ಲದೆ, ವಿವಿಧ ದೇಶಗಳ ಒಟ್ಟು 130 ಸುಂದರಿಯರು ಈ ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ. 2023ನೇ ಸಾಲಿನ 71ನೇ ಮಿಸ್ ವಲ್ಡ್ ಸ್ಪರ್ಧೆಯನ್ನು ಕಾಶ್ಮೀರದಲ್ಲಿ ಆಯೋಜನೆಯಾಗಿದ್ದು. ಡಿ.8ರಂದು ಕಾಶ್ಮೀರದಲ್ಲಿರುವ ಕಾಶ್ಮೀರ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. 27 ವರ್ಷಗಳ ಬಳಿಕ ಭಾರತದಲ್ಲಿ ಈ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ ನಡೆಯುತ್ತಿದ್ದು, ಭಾರತದಲ್ಲಿ ಎರಡನೇ ಬಾರಿಗೆ ಸ್ಪರ್ಧೆ ನಡೆಯುತ್ತಿದೆ. 130 ದೇಶಗಳ ರೂಪದರ್ಶಿಯರು ಇದರಲ್ಲಿ ಭಾಗಿಯಾಗಲಿದ್ದಾರೆ.
ಉಡುಪಿಯ ಸಿನಿ ಶೆಟ್ಟಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ. ಸಿನಿ ಶೆಟ್ಟಿ 2 ಆಗಸ್ಟ್ 2001 ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಜನಿಸಿದರು. ಆದರೂ ಈಕೆ ಕರಾವಳಿ ಬೆಡಗಿ, ಉಡುಪಿಯ ಜಿಲ್ಲೆಯ ಇನ್ನಂಜೆಯವರು. ಇವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟ ಗೆದ್ದಿದ್ದಾರೆ. 2022ರಲ್ಲಿ ಫೆಮಿನಾ ಮಿಸ್ ಕರ್ನಾಟಕ ಕೂಡ ಗೆದ್ದಿದ್ದಾರೆ.
ಹೋಟೆಲ್ ಉದ್ಯಮಿ ಸದಾನಂದ್ ಶೆಟ್ಟಿ ಮತ್ತು ಹೇಮಾ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಸಿನಿ ಶೆಟ್ಟಿ ನಟಿ, ಮಾಡೆಲ್ ಮತ್ತು ಕಂಟೆಂಟ್ ಕ್ರಿಯೇಟರ್ ಕೂಡ ಹೌದು.
71ನೇ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿರುವ ಸಿನಿ ಶೆಟ್ಟಿ ಇನ್ನು ಮಿಸ್ ವರ್ಲ್ಡ್ 2000 ಕಿರೀಟವನ್ನು ಅಲಂಕರಿಸಿದ ಪ್ರಿಯಾಂಕಾ ಚೋಪ್ರಾ ಅವರು ತಮಗೆ ಸ್ಫೂರ್ತಿ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೇ ರೂಪದರ್ಶಿಯಾಗಿ ವೃತ್ತಿ ಬದುಕು ಆರಂಭಿಸಿರುವ ಸಿನಿಶೆಟ್ಟಿ ಈಗಾಗಲೇ ಪ್ರತಿಷ್ಠಿತ ಬ್ರಾಂಡ್ಗಳ ಜಾಹೀರಾತುಗಳಲ್ಲಿ ಮಿಂಚಿದ್ದಾರೆ. PME ಎಂಟರ್ಟೈನ್ಮೆಂಟ್, ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಇಲಾಖೆ ಸಹಭಾಗಿತ್ವದಲ್ಲಿ ಈ ಬಾರಿಯ ವಿಶ್ವಸುಂದರಿ ಕಾರ್ಯಕ್ರಮ ಆಯೋಜಿಸಲಾಗಿದೆ.