Categories
ರಾಷ್ಟ್ರೀಯ ವಾರ್ತೆ

ಸಿಲಿಂಡರ್ ಬೆಲೆ 200 ರೂ.ಇಳಿಕೆ!

ಸಿಲಿಂಡರ್ ಬೆಲೆ 200 ರೂ.ಇಳಿಕೆ!
– ಗೃಹಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ
– ಉಜ್ವಲ ಯೋಜನೆಯಡಿ 400 ರೂ ಇಳಿಕೆ
– ಯಾವುದಕ್ಕೆ ಎಷ್ಟು ಇಳಿಕೆ ಆಗಿದೆ ಇಲ್ಲಿದೆ ಮಾಹಿತಿ

NAMMUR EXPRESS NEWS
ನವ ದೆಹಲಿ: ಗೃಹಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಸಾಮಾನ್ಯ ಗ್ರಾಹಕರಿಗೆ 200 ಇಳಿಕೆ ಮಾಡಿದ್ದು, ಇದರಿಂದಾಗಿ ಪ್ರಧಾನಮಂತ್ರಿ ಉಜ್ವಲಾ ಸ್ಕೀಮ್‌ ಫಲಾನುಭವಿಗಳಿಗೆ ಪ್ರತಿ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ 400 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಪ್ರತಿ ಎಲ್‌ ಪಿಜಿ ಸಿಲಿಂಡರ್‌ ಗೆ ಹೆಚ್ಚುವರಿಯಾಗಿ 200 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ. ಪ್ರಧಾನಮಂತ್ರಿ ಉಜ್ವಲಾ ಯೋಜನೇತರ ಗ್ರಾಹಕರಿಗೆ 14ಕೆಜಿಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದ್ದು,ಪ್ರತಿ ಸಿಲಿಂಡರ್‌ ಬೆಲೆ 900 ರೂಪಾಯಿ ಆಗಲಿದೆ. ಉಜ್ವಲಾ ಸ್ಕೀಮ್‌ ನ ನೋಂದಾಯಿತ ಗ್ರಾಹಕರಿಗೆ ಒಟ್ಟು 400 ರೂಪಾಯಿ ಸಬ್ಸಿಡಿ ದೊರೆಯುವ ಮೂಲಕ ಪ್ರತಿ ಸಿಲಿಂಡರ್‌ ಬೆಲೆ 700 ರೂಪಾಯಿ ಆಗಲಿದೆ. ಗೃಹ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಗೆ 200 ರೂಪಾಯಿ ಸಬ್ಸಿಡಿ ನೀಡುವ ನಿರ್ಧಾರದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಒಟ್ಟು 7,500 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಠಾಕೂರ್‌ ತಿಳಿಸಿದ್ದಾರೆ.

ರಕ್ಷಾ ಬಂಧನ್‌, ಓಣಂ ಹಬ್ಬದ ಸಂದರ್ಭದಲ್ಲಿ ಗೃಹಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯನ್ನು ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸುಮಾರು 73 ಲಕ್ಷ ಮಹಿಳಾ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಉಜ್ವಲಾ ಸ್ಕೀಮ್‌ ಸಬ್ಸಿಡಿಯನ್ನು ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಠಾಕೂರ್‌ ತಿಳಿಸಿದ್ದಾರೆ

ಇದನ್ನೂ ಓದಿ : ಬ್ಯಾಂಕಿಗೆ ಬಂದ ಮಹಿಳೆ ಮೈಮೇಲೆ ಬಂತು ದೇವರು!

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.