ಉಚಿತ ಕೊಡುಗೆಗಳಿಂದ ದೇಶಕ್ಕೆ ಹಾನಿ.!
– ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅಗತ್ಯ
– ಮತ್ತೆ ‘ಪ್ರಧಾನಿ ಮೋದಿ’ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನೇರ ಎಚ್ಚರಿಕೆ
NAMMUR EXPRESS NEWS
ನವದೆಹಲಿ: ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯಂತ ಅಗತ್ಯ, ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಉಚಿತ ಯೋಜನೆಗಳು ತಾತ್ಕಾಲಿಕ ರಾಜಕೀಯ ಲಾಭ ತರಬಹುದು. ಆದರೇ ಉಚಿತ ಕೊಡುಗೆಗಳು ದೇಶಕ್ಕೆ ಹಾನಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ನೇರವಾಗೇ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಬೇಜವಾಬ್ದಾರಿತದನ ಹಣಕಾಸು ನೀತಿಗಳು ಹಾಗೂ ಜನಪ್ರಿಯ ಕಾರ್ಯಕ್ರಮಗಳು ಅಲ್ಪಾವಧಿಯಲ್ಲಿ ರಾಜಕೀಯ ಲಾಭವನ್ನು ತಂದುಕೊಡಬಲ್ಲವು. ಆದರೇ ಇಂತಹ ಕೊಡುಗೆಗಳಿಂದ ದೀರ್ಘಾವಧಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂಬುದಾಗಿ ಪರೋಕ್ಷವಾಗಿ ಉಚಿತ ಯೋಜನಗಳ ವಿರುದ್ಧ ಹರಿಹಾಯ್ದಿದ್ದಾರೆ.
ಜಾಗತಿಕ ಸಾಲದ ಬಿಕ್ಕಟ್ಟಿನ ಕುರಿತು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ವಿತ್ತೀಯ ಶಿಸ್ತಿನ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ಸಾಲದ ಬಿಕ್ಕಟ್ಟು, ಜಗತ್ತಿಗೆ ಅದರಲ್ಲೂ ವಿಶೇಷವಾಗಿ ಅಭಿವೃದ್ಧಿ ಶೀಲ ದೇಶಗಳಿಗೆ ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಸಾಲದ ಬಿಕ್ಕಟ್ಟಿಗೆ ಸಿಲುಕಿರುವ, ಬಿಕ್ಕಟ್ಟು ಅನುಭವಿಸುತ್ತಿರುವ ದೇಶಗಳು ಆರ್ಥಿಕ ಶಿಸ್ತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.