76ನೇ ಸ್ವಾತಂತ್ರ್ಯ ಸಂಭ್ರಮ!
– ದೆಹಲಿ ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ
– ಬೆಂಗಳೂರಲ್ಲಿ ಸಿದ್ದರಾಮಯ್ಯ ಧ್ವಜ ವಂದನೆ
– ಮನೆ ಮನೆ, ಹಳ್ಳಿ ಹಳ್ಳಿಯಲ್ಲೂ ಸ್ವಾತಂತ್ರ್ಯದ ಹಬ್ಬ
– ಸರ್ಕಾರಿ ಕಚೇರಿ, ಅಂಗಡಿ, ಕಚೇರಿಗಳಲ್ಲಿ ಹಾರಾಡಿದ ಭಾವುಟ
NAMMUR EXPRESS NEWS
ನವದೆಹಲಿ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ. ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಇಡೀ ಭಾರತದ ಹಳ್ಳಿ ಹಳ್ಳಿಯಲ್ಲೂ ಜನತೆಗೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಳಿಗ್ಗೆಯೇ ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇನ್ನು ಇಡೀ ದೇಶದ ಮನೆ ಮನೆ, ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ, ಖಾಸಗಿ ಅಂಗಡಿ, ಕಚೇರಿಗಳಲ್ಲಿ ಸ್ವಾತಂತ್ರ್ಯ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಧ್ವಜರೋಹಣ ಜತೆಗೆ ವಿವಿಧ ಕಾರ್ಯಕ್ರಮ ಕೂಡ ಆಯೋಜನೆ ಮಾಡಲಾಗಿದೆ. ದಿನಾಚರಣೆ ಪ್ರಯುಕ್ತ ಸಂಪ್ರದಾಯದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಕರುನಾಡಲ್ಲಿ ಸ್ವಾತಂತ್ರ್ಯ ಸಡಗರ!
ದೇಶದಲ್ಲಿ ಎಲ್ಲೆಡೆ ಭಾರತ ಮಾತೆಯ ಪೂಜೆಯನ್ನು ಜನ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಜನರನ್ನು ಉದ್ದೇಶಿಸಿ ಮಾತನಾಡಿದರು. ಇಡೀ ಬೆಂಗಳೂರಲ್ಲಿ ಎಲ್ಲೆಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಜಿಲ್ಲೆ, ತಾಲೂಕುಗಳಲ್ಲಿಯೂ ಆಚರಣೆ!
ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹಳ್ಳಿ ಹಳ್ಳಿಯಲ್ಲೂ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಕಂಡು ಬರುತ್ತಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಧಿಕಾರಿಗಳು, ಆಯಾ ಕ್ಷೇತ್ರದ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023