Categories
ರಾಷ್ಟ್ರೀಯ ವಾರ್ತೆ

ದೇಶದೆಲ್ಲೆಡೆ ಪುಷ್ಪ 2 ಹವಾ..!

ದೇಶದೆಲ್ಲೆಡೆ ಪುಷ್ಪ 2 ಹವಾ..!
– ಬಹುನಿರೀಕ್ಷಿತ ಪುಷ್ಪ 2 ಚಿತ್ರ ಬಿಡುಗಡೆ
– ಚಿತ್ರಮಂದಿರಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ

NAMMUR EXPRESS NEWS
ಹೈದರಾಬಾದ್‌: ಬಹುನಿರೀಕ್ಷಿತ ಪುಷ್ಪ 2 ಚಿತ್ರ ದೇಶದ ಎಲ್ಲೆಡೆ ಬಿಡುಗಡೆಯಾಗಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.
ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಬೆಳಗ್ಗಿನ ಶೋ ರದ್ದುಪಡಿಸಲಾಗಿದೆ. ರಾಜ್ಯದ ಬಹುತೇಕ ಕಡೆ ಕನ್ನಡ ಅವತರಿಣಿಕೆಯ ಸಿನಿಮಾ ಜನರ ಮನ ಗೆಲ್ಲುತ್ತಿದೆ.

ಚಿತ್ರಮಂದಿರಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು!

ಟಾಲಿವುಡ್ ತವರು ಹೈದರಾಬಾದ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್‌ಪಲ್ಲಿಯ ಥಿಯೇಟರ್‌ನಲ್ಲಿ ಡಿ. 4 ರಂದು ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 12 ವರ್ಷದ ಮಗ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪುಷ್ಪ 2- ದಿ ರೂಲ್ ಚಿತ್ರ ಡಿಸೆಂಬರ್ 5ರ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಅದಕ್ಕೂ ಮುನ್ನ ನಡೆದ ಪ್ರೀಮಿಯ‌ರ್ ಶೋ ನೋಡಲು ಹೈದರಾಬಾದ್‌ನ ಕುಟುಂಬ ಚಿತ್ರಮಂದಿರಕ್ಕೆ ಬಂದಿತ್ತು. ರೇವತಿ (39) ಮೃತ ಮಹಿಳೆ. ಅವರ ಒಂಬತ್ತು ವರ್ಷದ ಮಗ ಶ್ರೀತೇಜಾನನ್ನು ಆಂಬುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ, ತೇಜಾ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತಡರಾತ್ರಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದಿಲ್‌ಸುಖ್‌ನಗರ ನಿವಾಸಿಯಾದ ರೇವತಿ, ಶ್ರೀ ತೇಜಾ ಅವರ ಪತಿ ಭಾಸ್ಕ‌ರ್ ಮತ್ತು ಕಿರಿಯ ಮಗುವಿನೊಂದಿಗೆ ಆರ್‌ಟಿಸಿ ಕ್ರಾಸ್‌ ರೋಡ್‌ನಲ್ಲಿರುವ ಸಂಧ್ಯಾ ಥಿಯೇಟರ್‌ಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಕುಟುಂಬದೊಂದಿಗೆ ಥಿಯೇಟರ್‌ನಿಂದ ಹೊರಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.