BREAKING NEWS INDIA
ಒಂದು ರಾಷ್ಟ್ರ, ಒಂದು ಚುನಾವಣೆಗೆ ಗ್ರೀನ್ ಸಿಗ್ನಲ್?!
– ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
– ಇನ್ಮೇಲೆ ನಡೆಯಲಿದೆಯಾ ಒಂದೇ ಬಾರಿ ಎಲ್ಲಾ ಚುನಾವಣೆ?!
NAMMUR EXPRESS NEWS
ನವ ದೆಹಲಿ : ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿರುವ ವರದಿಗೆ ಸಂಪುಟದ ಒಪ್ಪಿಗೆ ದೊರೆತಿದೆ. ಎನ್ಎಎ ಸರ್ಕಾರವು ಈಗ ಮಸೂದೆಯ ಬಗ್ಗೆ ಒಮ್ಮತವನ್ನು ಸಾಧಿಸಲು ಮತ್ತು ವಿಸ್ತ್ರತ ಚರ್ಚೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲು ಯೋಜಿಸಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ಉಪಕ್ರಮವು ಎರಡೂ ಲೋಕಸಭೆಯ ಚುನಾವಣೆಗಳನ್ನು ಸಮನ್ವಯಗೊಳಿಸುವ ಗುರಿಯನ್ನು ಹೊಂದಿದೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿಯು ಲೋಕಸಭೆ ಚುನಾವಣೆಯನ್ನು ರಾಜ್ಯ ವಿಧಾನಸಭೆ ಚುನಾವಣೆಗಳು ಮತ್ತು ದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೊಂದಿಗೆ ನಡೆಸುವ ಗುರಿ ಹೊಂದಿದೆ.