ಭಾರತ- ಪಾಕ್ ಕ್ರಿಕೆಟ್ ಪಂದ್ಯಕ್ಕೆ ಕ್ಷಣಗಣನೆ!
– ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಆತಂಕ
– ಯಾರ ಮುಡಿಗೇರಲಿದೆ ಏಷ್ಯಾಕಪ್ ಟ್ರೋಪಿ?
NAMMUR EXPRESS NEWS : ಏಷ್ಯಾಕಪ್ 2023 ಸೂಪರ್-4 ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ವೇಜ್ ಕದನಕ್ಕೆ ಕೊಲಂಬೊದ ಆರ್. ಪ್ರೇಮದಾಸ ಮೈದಾನ ಆತಿಥ್ಯವಹಿಸುತ್ತಿದೆ. ಉಭಯ ತಂಡಗಳ ಈ ಪಂದ್ಯ ಸೆಪ್ಟೆಂಬರ್ 10ರಂದು ನಡೆಯಲಿದ್ದು, ಇದಕ್ಕಾಗಿ ಎರಡೂ ತಂಡಗಳು ಕೊಲಂಬೊ ತಲುಪಿವೆ. ಆದರೆ ಪಂದ್ಯದ ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಕೂಡ ಈ ಪಂದ್ಯಕ್ಕೆ ಮೀಸಲು ದಿನವನ್ನು ಇಟ್ಟುಕೊಂಡಿದ್ದು, ಸೆಪ್ಟೆಂಬರ್ 10 ರಂದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಮರುದಿನ ಅಂದರೆ ಸೆಪ್ಟೆಂಬರ್ 11 ರಂದು ಪಂದ್ಯವನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
ಏಷ್ಯಾಕಪ್ ಲೀಗ್ ಸುತ್ತಿನಲ್ಲೂ ಭಾರತ-ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆದರೆ ಆ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ, ಪಾಕ್ ವೇಗಿಗಳ ದಾಳಿಗೆ ಸಿಲುಕಿ ಆರಂಭದಲ್ಲೇ ಹಿನ್ನಡೆ ಅನುಭವಿಸಿತ್ತು.