ದೇಶದೆಲ್ಲೆಡೆ ಸಂಭ್ರಮದ ಕ್ರಿಸ್ಮಸ್
– ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ವಿಶೇಷ ಪ್ರಾರ್ಥನೆ
– ಚರ್ಚ್ಗಳಲ್ಲಿ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಭಾಗಿ
– ಡಿ. 25ರಂದು ಚರ್ಚ್ಗಳಲ್ಲಿ ಅದ್ದೂರಿ ಕಾರ್ಯಕ್ರಮ
NAMMUR EXPRESS NEWS
ಬೆಂಗಳೂರು/ಮಂಗಳೂರು: ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ರಾಜ್ಯದ ಎಲ್ಲೆಡೆ ಸೇರಿ ವಿಶ್ವದ ಮೂಲೆ ಮೂಲೆಯಲ್ಲಿ ಡಿ. 24 ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಲಾಗಿದ್ದು, ಡಿ.25ರಂದು ಹಬ್ಬ ನಡೆಯಲಿದೆ. ವಿವಿಧ ಚರ್ಚ್ಗಳನ್ನು ವಿದ್ಯುದ್ದೀಪಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ರಾತ್ರಿಯೆಲ್ಲಾ ವಿಶೇಷ ಪೂಜೆ, ಪ್ರಾರ್ಥನೆ, ಅಲಂಕಾರ ನಡೆಯಿತು. ಚರ್ಚ್ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ಕ್ರಿಬ್ಗಳನ್ನು (ಗೋದಲಿ) ನಿರ್ಮಿಸಲಾಗಿತ್ತು, ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್ಗಳಲ್ಲಿ ರಾತ್ರಿ ವೇಳೆ ಜರಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್ ಗೀತೆಗಳನ್ನು (ಕ್ಯಾರಲ್ಸ್) ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಯೇಸು ಕಂದನಿಗೆ ನಮಿಸಿದರು. ಕ್ರೈಸ್ತ ಸಮುದಾಯದವರಿಗೆ ಪ್ರಮುಖ ಹಬ್ಬವಾಗಿರುವ ಕ್ರಿಸ್ಮಸ್ ಆಚರಣೆ ನಡೆಯುತ್ತಿದೆ. ಎಲ್ಲಾ ಚರ್ಚ್ಗಳಲ್ಲಿ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಡಿ. 25ರಂದು ಚರ್ಚ್ ಗಳಲ್ಲಿ ಹಬ್ಬದ ಬಲಿ ಪೂಜೆ, ಇತ್ಯಾದಿ ನಡೆಯುತ್ತಿದೆ. ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು