Categories
ರಾಷ್ಟ್ರೀಯ ವಾರ್ತೆ

ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ!

ಭತ್ತದ ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ!
– ಮಾರ್ಗಮಧ್ಯೆ ಕಾರಿನಿಂದ ಇಳಿದು ನಾಟಿ ಮಾಡಿದರು
– ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದ ರಾಹುಲ್

NAMMUR EXPRESS NEWS
ಚಂಡೀಗಢ: ದೇಶದಲ್ಲಿ ಮಳೆಗಾಲ ಆರಂಭವಾಗಿದ್ದು, ಕೃಷಿ ಚಟುವಟಿಕೆ ಜೋರಾಗಿದೆ. ಈ ನಡುವೆ ಯುವ ನಾಯಕ ರಾಹುಲ್ ಗಾಂಧಿ ಶನಿವಾರ ಬೆಳ್ಳಂಬೆಳಗ್ಗೆ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮಕ್ಕೆ ಭೇಟಿ ನೀಡಿದ್ದುಅಲ್ಲಿ ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ್ದಾರೆ.
ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದ ರಾಹುಲ್ ಗಾಂಧಿ ಭತ್ತದ ಗದ್ದೆಯಲ್ಲಿ ರೈತರು ನಾಟಿ ಮಾಡುತ್ತಿರುವುದನ್ನು ಕಂಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿ, ಹಳ್ಳಿ ಹುಡುಗನಂತೆ ಮೊಣಕಾಲುದ್ದಕ್ಕೆ ಪ್ಯಾಂಟ್ ಮಡಿಸಿಕೊಂಡು ರೈತರೊಂದಿಗೆ ಗದ್ದೆಗಿಳಿದು ಅವರಿಗೆ ನಾಟಿ ಮಾಡಲು ಸಹಾಯ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡರೂ ಸಹ ರೈತರೊಂದಿಗೆ ಸೇರಿಕೊಂಡು ಟ್ರ್ಯಾಕ್ಟರ್ ಮೂಲಕ ಗದ್ದೆ ಉಳುಮೆ ಮಾಡಿ ಭತ್ತದ ನಾಟಿಗೆ ಸಹಕರಿಸಿದ್ದಾರೆ.ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಕಷ್ಟ ಸುಖ ವಿಚಾರಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ರಾಹುಲ್ ಗಾಂಧಿ ಸಮಾಜದ ಎಲ್ಲ ಹಂತದ ಜನರನ್ನ ಭೇಟಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಬೈಕ್ ಮೆಕ್ಯಾನಿಕ್ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು. ವರ್ಕ್‌ಶಾಪ್‌ನಲ್ಲಿ ಮೆಕ್ಯಾನಿಕ್‌ಗಳೊಂದಿಗೆ ಸಂಭಾಷಣೆ ನಡೆಸಿದ್ದರು. ಈ ವೇಳೆ ಮೋಟಾರ್ ಸೈಕಲ್‌ಗಳನ್ನು ರಿಪೇರಿ ಮಾಡೋದನ್ನ ಪ್ರಯತ್ನಿಸಿದ್ದರು.

ಕರ್ನಾಟಕದಲ್ಲಿ ಸರ್ಕಾರಿ ಬಸ್ಸಲ್ಲಿ ಪಯಣಿಸಿದ್ದರು!

ಕರ್ನಾಟಕದಲ್ಲೂ ರಾಹುಲ್ ಗಾಂಧಿ ಬಸ್ಸಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಹಾಗೂ ಸ್ವಿಗ್ಗಿ ಡೆಲಿವರಿ ಬಾಯ್ಸ್ಗಳೊಂದಿಗೆ ಸಂವಾದ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ!

[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.