ಆಂಧ್ರದಲ್ಲಿ ಅಪರೂಪದ ಮೀನು ಪತ್ತೆ..!
– ಸ್ವಲ್ಪ ಮನುಷ್ಯನಂತೆ ಕಂಡರೂ ತುಂಬಾ ಡೇಂಜರ್ ಈ ಜೀವಿ
– ಮೀನಿನ ವಿಚಿತ್ರ ರೂಪಕ್ಕೆ ದಂಗಾದ ಮೀನುಗಾರರು!
NAMMUR EXPRESS NEWS
ವಿಜಯವಾಡ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ಗುರುವಾರ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದೆ. ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ದಂಗಾಗಿದ್ದಾರೆ. ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದು, ಇದು ಪಫ್ಫರ್ ಫಿಶ್ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ರೀತಿ ಕಾಣುತ್ತದೆ. ಅಂದಹಾಗೆ ಈ ಪಫ್ಫರ್ ಫಿಶ್ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್ ಸೇವನೆ ಮಾಡುತ್ತಾರೆ.