ಚುನಾವಣಾ ರಾಜಕೀಯಕ್ಕೆ ಸೋನಿಯಾ ಗಾಂಧಿ ಗುಡ್ಬೈ?!
– ಕರ್ನಾಟಕದಿಂದಲೇ ರಾಜ್ಯಸಭೆಗೆ ಸ್ಪರ್ಧೆ?
– ಅನಾರೋಗ್ಯ ಕಾರಣ ನೇರ ಸ್ಪರ್ಧೆ ಡೌಟು
NAMMUR EXPRESS NEWS
ಕರ್ನಾಟಕದಲ್ಲಿ ಎಳೆಂಟು ತಿಂಗಳಲ್ಲಿ ನಾಲ್ಕು ಸ್ಥಾನಗಳಿಗೆ ರಾಜ್ಯ ಸಭಾ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಸೋನಿಯಾ ಗಾಂಧಿಯವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗುತ್ತಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ತಿರ್ಮಾನಿಸಿರುವ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿದ್ದರಾಮಯ್ಯರವರು ಮನವಿ ಮಾಡಿದ್ದಾರೆ ಎಂಬ ಮಾತು ರಾಜಕೀಯವಾಗಿ ಕೇಳಿಬರುತ್ತಿದೆ.
ಕರ್ನಾಟಕದ ಮೂರು ಮಂದಿ ರಾಜ್ಯ ಸಭಾ ಸದಸ್ಯರ ಅವಧಿ ಮುಂದಿನ 2024ರ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಹೀಗಾಗಿ ಈ ಮೂರೂ ಸ್ಥಾನಗಳಿಗೆ ಪುನಃ ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಇದೀಗ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಎಲ್ಲಾ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಅವಕಾಶವಿದೆ. ಸೋನಿಯಾ ಗಾಂಧಿ ಅವರೊಂದಿಗೆ ಉತ್ತರ ಪ್ರದೇಶ ಮೂಲದ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಮತ್ತು ಕರ್ನಾಟಕದ ಸೈಯದ್ ನಾಸೀರ್ ಹುಸೇನ್ ಅವರನ್ನು ರಾಜ್ಯಸಭೆಗೆ ಮರುನಾಮಕರಣ ಮಾಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸೋನಿಯಾ ಅವರನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇತ್ತೀಚೆಗೆ ಸೋನಿಯಾ ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸಂಸತ್ತಿನಲ್ಲಿ ಇರದಂತೆ ನೋಡಿಕೊಳ್ಳಲು ಬಿಜೆಪಿ ಯೋಜಿಸುತ್ತಿರುವುದರಿಂದ, ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬಕ್ಕೆ ಸುರಕ್ಷಿತ ಮಾರ್ಗಗಳನ್ನು ಒದಗಿಸಲು ಯೋಜನೆ ರೂಪಿಸುತ್ತಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಿಂದ ಶಿಕ್ಷೆಗೊಳಗಾದ ನಂತರ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವುದರಿಂದ ಇದು ಗಾಂಧಿ ಕುಟುಂಬಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿ ಬರುತ್ತಿದೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023