ಮಾ .31ರಂದು ಯಾವುದೇ ‘ಬ್ಯಾಂಕ್’ಗೆ ರಜೆ ಇಲ್ಲ
– ಆರ್. ಬಿ.ಐ ಮಹತ್ವದ ಆದೇಶ
– ಎಲ್ಲಾ ಆದಾಯ ತೆರಿಗೆ ಕಚೇರಿಗಳು ತೆರೆದಿರುತ್ತವೆ.!
– ನೀವು ಆದಾಯ ತೆರಿಗೆ ಕಟ್ಟಿ ದಾಖಲೆ ಪಡೆಯಿರಿ!
NAMMUR EXPRESS NEWS
ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್’ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ ಬಿ ಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಲ್ಲಾ ಆದಾಯ ತೆರಿಗೆ ಕಚೇರಿಗಳು ತೆರೆದಿರುತ್ತವೆ. ಈ ಹಿಂದೆ, ಆದಾಯ ತೆರಿಗೆ ಇಲಾಖೆ ತನ್ನ ಎಲ್ಲಾ ಕಚೇರಿಗಳನ್ನ ತೆರೆದಿಡಲು ನಿರ್ಧರಿಸಿತ್ತು. ಗುಡ್ ಫ್ರೈಡೆ ರಜೆ ಸೇರಿದಂತೆ ಶನಿವಾರ ಮತ್ತು ಭಾನುವಾರ ರಜಾದಿನಗಳನ್ನ ಇಲಾಖೆ ರದ್ದುಗೊಳಿಸಿತ್ತು.