ಟಾಪ್ ನ್ಯೂಸ್
ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು!
– ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲು
– ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ
– ದರ್ಶನ್ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ
NAMMUR EXPRESS NEWS
ಉಡುಪಿ: ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ. ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.
– ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ
ಉಡುಪಿ: ಬೆಂಗಳೂರಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು. ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಉಡುಪಿ: ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುವುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದರ್ಶನ್ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ..!
ಉಡುಪಿ: ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅಂತ್ಯಗೊಳ್ಳಲಿದೆ. ಹೀಗಾಗಿ ವಿಡಿಯೋ ಕಾನ್ಸರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ. ಜೂನ್ 11 ರಂದು ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್ರನ್ನು ಅರೆಸ್ಟ್ ಮಾಡಲಾಗಿತ್ತು. ಜೂನ್ 22 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ ಹಿನ್ನಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿಕ್ಕೆ ಸಿದ್ದತೆ ಮಾಡಲಾಗಿದೆ.
ಕಣ್ಣುಕುಕ್ಕುವ ಎಲ್ಇಡಿ ಲೈಟ್ ವಿರುದ್ಧ ಕಾರ್ಯಾಚರಣೆ
ಉಡುಪಿ: ಬೆಂಗಳೂರು: ಕಣ್ಣುಕುಕ್ಕುವ ಎಲ್ಇಡಿ ಲೈಟ್ ವಿರುದ್ಧ ಕಾರ್ಯಾಚರಣೆ ಶುರು ಮಾಡಿರುವ ಪೊಲೀಸರು ಕರ್ನಾಟಕದಾದ್ಯಂತ 1500ಕ್ಕೂ ಹೆಚ್ಚು ಪ್ರಕರಣ ದಾಖಲು ಮಾಡಿದ್ದಾರೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ತಿಳಿಸಿದ್ದಾರೆ.
ಉಡುಪಿ: ತೀಕ್ಷ್ಯ ಬೆಳಕು ಸೂಸುವಂಥ ಎಲ್ಇಡಿ ಲೈಟ್ಗಳನ್ನು ಅಳವಡಿಸಿದ ಅತಿಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿವೆ. ನಗರದಲ್ಲಿ 686 ಕೇಸ್ ದಾಖಲಿಸಲಾಗಿದೆ. ನಂತರದ ಸ್ಥಾನಗಳಲ್ಲಿ ಮಂಗಳೂರು ನಗರ (96) ಹಾಗೂ ರಾಯಚೂರು (93) ಇವೆ. ಕೊಪ್ಪಳ, ಕೆಜಿಎಫ್, ಕೋಲಾರ, ಚಿಕ್ಕಬಳ್ಳಾಪುರಗಳಲ್ಲಿ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ.ಬಿಸಿ ಮುಟ್ಟಿಸಲು ಶುರುಮಾಡಿದ್ದೇವೆ. ಕೇಂದ್ರ ಮೋಟಾರು ವಾಹನ ಕಾಯ್ದೆ ಉಲ್ಲಂಘಿಸಿ ತೀಕ್ಷ್ಯ ಬೆಳಕು ಸೂಸುವ ಎಲ್ಇಡಿ ಲೈಟ್ ಅಳವಡಿಸಿದ ಸಂಬಂಧ 1518 ಪ್ರಕರಣಗಳನ್ನು ದಾಖಲಿಸಲಾಗಿದೆ. ಕ್ರಮ ಕೈಗೊಂಡ ಅಧಿಕಾರಿಗಳಿಗೆ, ಸಿಬ್ಬಂದಿಗೆ ವಂದನೆಗಳು ಎಂದು ಅಲೋಕ್ ಕುಮಾರ್ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.