ದೇಶದಾದ್ಯಂತ ಏಕಕಾಲದಲ್ಲಿ ಲೋಕಸಭೆ, ವಿಧಾನ ಸಭೆ ಚುನಾವಣೆ!
* ಒಂದು ರಾಷ್ಟ್ರ, ಒಂದು ಚುನಾವಣೆ!
* ಕೇಂದ್ರ ಸಚಿವ ಸಂಪುಟದಿಂದ ಒಪ್ಪಿಗೆ!
NAMMUR EXPRESS NEWS
ದೆಹಲಿ :ಪ್ರಧಾನಿ ಮೋದಿ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಸೆ18 ರಂದು ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ ಮುಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ.