ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಆತ್ಮಹತ್ಯೆ!
– ಫ್ರೀ ಬಸ್ಸಲ್ಲಿ ಹೋದ ಹೆಂಡ್ತಿ ಮನೆಗೆ ಬಂದಿಲ್ಲ ಅಂತ ಬಸ್ ಅಡಿ ಬಿದ್ದು ಸಾಯಲು ಹೋದ ಕುಡುಕ ಗಂಡ.!
– ಅಕ್ರಮ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್ ರೈ ಅರೆಸ್ಟ್
– ಮಂಗಳೂರು: ಬೈಕ್ ಅಪಘಾತಕ್ಕೆ ಇಬ್ಬರು ಸಾವು!
– ತಹಸೀಲ್ದಾರ್ ಹತ್ರ 10 ಐಷಾರಾಮಿ ಕಾರು: 130 ಕೋಟಿ ಅಸ್ತಿ?!
NAMMUR EXPRESS NEWS
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದಲ್ಲಿ ಟ್ರಿಪ್ಪಿಗೆ ಹೋದ ಹೆಂಡತಿ ಮನೆಗೆ ಬಂದಿಲ್ಲ ಅಂತ ಬಸ್ ಅಡಿ ಬಿದ್ದು ಸಾಯಲು ಹೋದ ಕುಡುಕ ಗಂಡನೊಬ್ಬ ಬಸ್ ಚಕ್ರದಡಿ
ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕುಡುಕ ಪತಿಯೊಬ್ಬ ಫ್ರೀ ಬಸ್ಸಿನಲ್ಲಿ ಟ್ರಿಪ್ಗೆ ಹೋದ ತನ್ನ ಪತ್ನಿ ಮನೆಗೆ ಬಂದಿಲ್ಲವೆಂದು ಬಸ್ ಟೈಯರ್ಗೆ ತಲೆಕೊಟ್ಟಿದ್ದಾನೆ. ಇದರಿಂದಾಗಿ ಹೊಸಕೋಟೆ ಬಸ್ ನಿಲ್ದಾಣದಲ್ಲಿ ಅರ್ಧಗಂಟೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಕೆಲಕಾಲ ಪರದಾಟ ಅನುಭವಿಸಿದರು.
ಈ ವೇಳೆ ಕುಡುಕ ಪತಿ ನನ್ನ ಹೆಂಡತಿ ಟ್ರಿಪ್’ಗೆ ಹೋದವಳು ಇನ್ನೂ ವಾಪಸ್ ಬಂದಿಲ್ಲ. ಸಿದ್ದರಾಮಯ್ಯಸರಿಯಿಲ್ಲ, ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣವನ್ನು ಕೂಡಲೇ ರದ್ದುಗೊಳಿಸಬೇಕು. ಅಷ್ಟೆ ಅಲ್ಲದೆ ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣವನ್ನು ತೆಗೆದು ವ್ಯಕ್ತಿ ಖಾತೆಗೆ ಹಾಕಬೇಕೆಂದು ಒತ್ತಾಯಿಸಿದ್ದಾನೆ. ಕಂಠಪೂರ್ತಿ ಕುಡಿದು ತೂರಾಡಿ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದಾನೆ. ಅಲ್ಲದೆ ಬಸ್ ಟೈಯ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸಾರ್ವಜನಿಕರು ಕುಡುಕನನ್ನು ರಕ್ಷಣೆ ಮಾಡಿ ಹೊಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ತಹಸೀಲ್ದಾರ್ ಹತ್ರ 10 ಐಷಾರಾಮಿ ಕಾರು!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್. ಪುರಂನ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತಹಶೀಲ್ದಾರ್ ಮನೆ, ಕಚೇರಿ ದಾಳಿ ನಡೆಸಿ ಎರಡು ದಿನಗಳ ಕಾಲ ನಿರಂತರ ಪರಿಶೀಲನೆ ಬಳಿಕ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ತನಿಖೆಗೆ ಸರಿಯಾಗಿ ಸ್ಪಂದಿಸಿಲ್ಲ. ಮನೆಯಲ್ಲಿ ಸಿಕ್ಕ ದಾಖಲೆಗಳಿಗೆ ಸಂಬಂಧಿಸಿದಂತೆ ಸರಿಯಾದ ಉತ್ತರ ನೀಡಿಲ್ಲ. ಕಳೆದ 30 ಗಂಟೆಗಳಿಂದ ಮನೆಯಲ್ಲಿ ನಿರಂತರ ಶೋಧ ನಡೆಸಲಾಗಿತ್ತು. ಹೀಗಾಗಿ ತಹಶೀಲ್ದಾರ್ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅಜಿತ್ ರೈ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ.4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ ಹೊಂದಿದ್ದಾರೆ. ಎಲ್ಲದಕ್ಕೂ ಒಂದೇ ನಂಬರ್ ರಿಜಿಸ್ಟರ್ ಇದೆ. ಇದ್ಯಾವುದಕ್ಕೂ ಲೆಕ್ಕ ಕೊಡ್ತಾ ಇಲ್ಲ. ಸರಿ ಸುಮಾರು 150 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮತ್ತೆ ವಶಕ್ಕೆ ಪಡೆಯಲು ತಯಾರಿ ನಡೆಸಿದ್ದಾರೆ.
ಬೈಕ್ ಅಪಘಾತಕ್ಕೆ ಇಬ್ಬರು ಬಾಲಕರ ಸಾವು
ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಮೃತ ಪಟ್ಟವರು ಪಚ್ಚನಾಡಿ ಮೂಲದ ಪವನ್ (16 ವರ್ಷ) ಮತ್ತು ಚಿರಾಗ್ (15 ವರ್ಷ) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರಿಬ್ಬರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ.
ಅಪಘಾತದ ವೇಳೆ ಸ್ಕೂಟರ್ ರಸ್ತೆ ಬದಿಯ ತಡೆಗೋಡೆಗೆ ಢಿಕಿ ಹೊಡೆದ ಪರಿಣಾಮವಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ಈ ಅಪಘಾತಕ್ಕೆ ಸಂಬಂಧಪಟ್ಟಂತೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹುಡುಗಿ ಸಿಗದೇ ಮನನೊಂದು ಆತ್ಮಹತ್ಯೆ!:
ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ದುರ್ದೈವಿ ನಾಗರಾಜ ಗಣಪತಿ ಗಾಂವರ್ (35 ವರ್ಷ) ಯಲ್ಲಾಪುರದ ತೇಲಂಗಾರ ಕಿರಗಾರಿಮನೆ ನಿವಾಸಿ. ಮೃತ ನಾಗರಾಜ್ ಅವರು ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದು ಎಲ್ಲರಂತೆಯೇ ತಾನು ಮದುವೆಯಾಗಬೇಕೆಂದು ಕನಸು ಕಟ್ಟಿಕೊಂಡಿದ್ದರು. ಅಂತಯೇ ಹಲವು ಸಮಯದಿಂದ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇನ್ನು ಹತ್ತಿರದ ಸಂಬಂಧೀಕರು, ಬೋಕರ್ಗಳ ಬಳಿ ಹೆಣ್ಣು
ಪ್ರತಿನಿತ್ಯ ಯಾಕೆ ನನಗೆ ಹೆಣ್ಣು ಸಿಗುತ್ತಿಲ್ಲ ಎಂದು ಚಿಂತೆಗೊಳ್ಳದ ನಾಗರಾಜ್ ತೀವ್ರ ಖಿನ್ನತೆಗೆ ಒಳಗಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ತನ್ನ ಮನೆಯ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023