ನೂಡಲ್ಸ್ ಸೇವಿಸಿದ ಇಬ್ಬರು ಮಕ್ಕಳ ಸಾವು!
– ಓರ್ವ ಮಗು ಗಂಭೀರ: ಜಂಕ್ಸ್ ಫುಡ್ ಡೇಂಜರ್!
– ಬ್ಯಾಂಕಲ್ಲೇ ಪತ್ತೆಯಾಯ್ತು ಕಳ್ಳ ನೋಟುಗಳು!
NAMMUR EXPRESS NEWS
ಹರಿಯಾಣ: ಫಾಸ್ಟ್ ಫುಡ್ ಇಬ್ಬರು ಮಕ್ಕಳ ಪ್ರಾಣವನ್ನೇ ತೆಗೆದ ಘಟನೆ ಹರಿಯಾಣದ ಸೋನಿಪತ್ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದುಬಂದಿದೆ. ನೂಡಲ್ಸ್, ಪರೋಟಾ ತಿಂದ ಮೂವರು ಮಕ್ಕಳ ಆರೋಗ್ಯ ಹದಗೆಟ್ಟಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಮತ್ತೊಂದು ಮಗುವಿನ ಸ್ಥಿತಿಯೂ ಗಂಭೀರವಾಗಿದೆ.
ಭೂಪೇಂದ್ರ ಎಂಬುವವರ ಕುಟುಂಬದವರು ರಾತ್ರಿ ಪರೋಟಾ ಮತ್ತು ನೂಡಲ್ಸ್ ತಿಂದಿದ್ದಾರೆ. ಆದರೆ ರಾತ್ರಿ ಒಂದು ಗಂಟೆ ಸುಮಾರಿಗೆ ಭೂಪೇಂದ್ರ ಅವರ ಮೂವರು ಮಕ್ಕಳ ಸ್ಥಿತಿ ಹದಗೆಟ್ಟಿದೆ. ನಂತರ ಮೂವರನ್ನೂ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಗಂಭೀರ ಸ್ಥಿತಿ ಕಂಡು ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಳಿಗ್ಗೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೇಮಾ (7) ಮತ್ತು ಬಾಕ ತರುಣ್ (5) ಎನ್ನಲಾಗಿದೆ. ಇನ್ನೂ 8 ವರ್ಷದ ಮಗ ಪ್ರವೇಶ್ ಚಿಕಿತ್ಸೆ ಇನ್ನೂ ಮುಂದುವರಿದಿದೆ ಎಂದು ವರದಿ ತಿಳಿಸಿದೆ. ಸಂಬಂಧಿಕರ ಪ್ರಕಾರ, ನೂಡಲ್ಸ್ ಅನ್ನು ನೆರೆಹೊರೆಯ ಫಾಸ್ಟ್ಫುಡ್ ಸೆಂಟರ್ನಿಂದಲೇ ಖರೀದಿಸಲಾಗಿದೆ. ಅದನ್ನು ತಿಂದ ನಂತರ ಮಕ್ಕಳ ಸ್ಥಿತಿ ಹದಗೆಟ್ಟು, ಸಾವನ್ನಪ್ಪಿದ್ದಾರೆ. ಕುಟುಂಬ ಸದಸ್ಯರ ಹೇಳಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ
ರಾಜ್ಯದಲ್ಲಿ ನಕಲಿ ನೋಟು ಹಾವಳಿ
ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಉಡುಪಿ, ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ ಗಳು ದಾಖಲಾಗಿವೆ.
ಆರ್ಬಿಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023