ಮಹಾ ಮಳೆಗೆ ಇಬ್ಬರು ಕಂದಮ್ಮಗಳ ಸಾವು!
– ದಾವಣಗೆರೆ, ಹಾವೇರಿಯಲ್ಲಿ ಭಾರೀ ಮಳೆ ದುರಂತ
– ಪುತ್ತೂರಲ್ಲಿ ಹೆಜ್ಜೇನು ಕಡಿದು ಓರ್ವ ಸಾವು
– ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಸಾವು
NAMMUR EXPRESS NEWS
ದಾವಣಗೆರೆ/ಹಾವೇರಿ: ಎಡಬಿಡದೇ ಸುರಿಯುತ್ತಿರುವ ಮಳೆಗೆ ಇಬ್ಬರು ಮಕ್ಕಳು ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ. ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ. ಕುಂಬಳೂರಿನ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡಿದ್ದಾಳೆ. ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಬಾಲಕಿಯ ತಂದೆ-ತಾಯಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿಯಲ್ಲೂ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟ ಘಟನೆ ಮಾಳಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭಾಗ್ಯ ಚಳಮರದ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತೊಂದು ಮಗುವಿಗೂ ಗಾಯವಾಗಿದೆ.
2 ದಿನಗಳ ಹಿಂದೆ ನಿರಂತರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 3 ವರ್ಷದ ಬಾಲಕಿ ಭಾಗ್ಯ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣವೆ ಆಕೆಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಹೆಜ್ಜೇನು ಕಡಿದು ಓರ್ವ ಸಾವು
ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡಕ್ಕೆ ಹೋಗಿದ್ದ ವೇಳೆ ಹೆಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ ಗುರುವ(55ವರವರು ಮೃತಪಟ್ಟವರು. ಜು.23ರಂದು ಮಧಾಹ್ನ ಕಟ್ಟಿಗೆಗೆಂದು ಮನೆ ಪಕ್ಕದ ಗುಡ್ಡೆಗೆ ಹೋದವರು ಅರ್ಧ ಗಂಟೆ ಬಿಟ್ಟು ಗುಡ್ಡೆಯಿಂದ ಓಡೋಡಿ ಬಂದಾಗ ಅವರ ಮುಖ, ಕುತ್ತಿಗೆ, ಮೈಯೆಲ್ಲಾಯಾವುದೋ ನೊಣ ಕಚ್ಚಿ ಊದಿಕೊಂಡಿರುವುದು ಕಂಡು ಬಂದಿತ್ತು. ಈ ಕುರಿತು ಅವರ ತಾಯಿ ವಿಚಾರಿಸಿದಾಗ ಹೆಚ್ಚೇನು ಕಚ್ಚಿರುವುದಾಗಿ ಗುರುವ ಅವರು ತಿಳಿಸಿದ್ದರು. ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಅವರು
ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಸಾವು
ಶಿವಮೊಗ್ಗದಲ್ಲಿ ವಿನೋಬನಗರ ಸಮೀಪ ಸಿಗುವ ರೈಲ್ವೆ ಟ್ರ್ಯಾಕ್ನ ಬಳಿಯಲ್ಲಿ ತಾಳಗುಪ್ಪ ಟ್ರೈನ್ಗೆ ತಲೆಕೊಟ್ಟು ಉಪನ್ಯಾಸಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಮಂಗಳವಾರ ಬೆಳಗ್ಗೆ ತಾಳಗುಪ್ಪ ಟ್ರೈನ್ಗೆ ಸಿಲುಕಿ ಓರ್ವ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಬಳಿಕ ಈ ಪ್ರಕರಣ ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಮೃತರು ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿರುವ 70 ವರ್ಷ ವಿಶ್ವನಾಥ್ ಎಂದು ತಿಳಿದುಬಂದಿದೆ. ಮೃತದೇಹ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಯ ಶವಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023