ಸೆಕೆಂಡ್ ಹ್ಯಾಂಡ್ ಕಾರ್ ಕದ್ದ ಕಳ್ಳರು!
– ಸುರತ್ಕಲ್ ಶೋ ರೂಂನಿಂದ ಎರಡು ಕಾರು ಕಳ್ಳತನ
– ಇನ್ಸ್ಟಾಗ್ರಾಮ್ ಪರಿಚಯ ಜೀವ ತೆಗೆಯಿತು!
– ಸಾಲದ ಬಾಧೆಗೆ ದಂಪತಿ ಆತ್ಮಹತ್ಯೆಗೆ ಶರಣು
– ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ
NAMMUR EXPRESS NEWS
ಸುರತ್ಕಲ್: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಕಾರುಗಳನ್ನು ಕಳವು ಮಾಡಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಜಂಕ್ಷನ್ ಬಳಿ ಬುಧವಾರ ತಡರಾತ್ರಿ ನಡೆದಿದ್ದು ವಾಹನ ಸವಾರರಿಗೆ ತಲೆನೋವಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಮಾಲಿಕತ್ವದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮುಂಬಾಗಿಲ ಮೂಲಕ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ತಡರಾತ್ರಿ ಕಚೇರಿಗೆ ಒಳನುಗ್ಗಿದ ಕಳ್ಳರು ಕಚೇರಿಯಲ್ಲಿ ಹುಡುಕಾಡಿ ಡ್ರಾವರ್ ನಲ್ಲಿದ್ದ ಕಾರುಗಳ ಕೀ ಪಡೆದು ಹಾಗೂ ಕಾರಿನ ಕಾಗದ ಪತ್ರದ ಜೊತೆಗೆ ಎರಡು ಕಾರುಗಳನ್ನು ಕಳವುಗೈದಿದ್ದಾರೆ. 6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಹಾಗೂ 9 ಲಕ್ಷ ಮೌಲ್ಯದ ಕ್ರೇಟಾ ಕಾರು ಸೇರಿ ಒಟ್ಟು 15 ಲಕ್ಷ ಮೌಲ್ಯದ ಕಾರು ಕಳ್ಳತನವಾಗಿದೆಯೆಂದು ಅಂದಾಜಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ಸ್ಟಾಗ್ರಾಮ್ ಪರಿಚಯ ಜೀವ ತೆಗೆಯಿತು!
ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಶಿವಮೊಗ್ಗ ಜಿಲ್ಲೆ ಸಾಗರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಓದುತ್ತಿದ್ದ 19 ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಪ್ರದೀಪ್ ಪೀಸುತ್ತಿದ್ದ ಎಂದು ಭವ್ಯಾ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ. ಪ್ರದೀಪನ ಹಿಂಸೆ ಬಳಲಾರದೆ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಭವ್ಯಾಳ ಸಹೋದರ ಪೊಲೀಸರಿಗೆ ದೂರು ನೀಡಿದ್ದರು.
ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು. ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು 3 ಮೃತಪಟ್ಟಿದ್ದರು. ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.
ಸಾಲದ ಬಾಧೆಗೆ ದಂಪತಿಗಳಿಬ್ಬರು ಬಲಿ!
ಸಾಲ ಬಾಧೆಗೆ ದಂಪತಿಗಳಿಬ್ಬರು ಬಲಿಯಾದ ಘಟನೆ ನಡೆದಿದೆ. ಮಧು (27)ಮತ್ತು ಮೋನಿಕಾ(21) ಎಂಬ ದಂಪತಿಗಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಬ್ಬರು ದಂಪತಿಗಳು ಮೈತುಂಬ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಇತ್ತಕಡೆ ಸಾಲಗಾರರ ಬೆನ್ನು ಹತ್ತಿದ್ದರ ಪರಿಣಾಮ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ದಂಪತಿಗಳು ಮನೆಯಿಂದ ಹೊರಗೆ ಬಾರದ ಕಾರಣ ಅಕ್ಕಪಕ್ಕದವರಿಗೆ ಅನುಮಾನ ಬಂದಿದೆ. ನಂತರ ಬೆಳಕಿಗೆ ಬಂದಿದ್ದೇ ಆತ್ಮಹತ್ಯೆ ಪ್ರಕರಣವಾಗಿದೆ. ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?
HOW TO APPLY : NEET-UG COUNSELLING 2023