ಟಾಪ್ ನ್ಯೂಸ್ ಕರ್ನಾಟಕ
– ಸುಳ್ಯದಲ್ಲಿ ನೀರುಪಾಲಾದ ಕಾರ್ಮಿಕ: ಶೋಧ
– ಫೇಸ್ಬುಕ್ನಲ್ಲಿ ಹಿಂದೂ ಧರ್ಮದ ಅವಹೇಳನ : ಆರೋಪಿ ಅರೆಸ್ಟ್.!
– ಜೈನಮುನಿ ಕೊಲೆ: ಇಬ್ಬರ ಬಂಧನ.!
– ಕರಾವಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್!
– ಇನ್ನು ಹಲವು ಸುದ್ದಿಗಳು… ಪೂರ್ತಿ ಓದಿ!
NAMMUR EXPRESS NEWS
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ ಆರಂಭಗೊಂಡರರೂ ಕಾರ್ಮಿಕನ ಸುಳಿವು ಲಭ್ಯವಾಗಿಲ್ಲ. ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ ಹುಡುಕಾಟ ನಡೆಸಿದರು. ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಶೋಧ ಕಾರ್ಯ ನಡೆಯುತ್ತಿದೆ.
ಫೇಸ್ಬುಕ್ನಲ್ಲಿ ಹಿಂದೂ ಧರ್ಮದ ಅವಹೇಳನ : ಆರೋಪಿ ಅರೆಸ್ಟ್.!
ಫೇಸ್ ಬುಕ್ ನಲ್ಲಿ ಹಿಂದೂ ಧರ್ಮವನ್ನು ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಶೇರ್ ಮಾಡಿದ ವ್ಯಕ್ತಿಯ ಮೇಲೆ ಸುಮೊಟೋ ಕೇಸ್ ದಾಖಲಿಸಿದ ಶಿರ್ವ ಪೊಲೀಸರು ಬೆಳಪು ನಿವಾಸಿ ಮೊಹಮ್ಮದ್ ಸಿದ್ದೀಕ್ (48) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡುವ ವಿಡಿಯೋ ವೈರಲ್ ಆಗಿತ್ತು. ಇದನ್ನು ಹೋಲುವಂತೆ ಹಿಂದೂ ಸಮುದಾಯಕ್ಕೆ ಸೇರಿದ ವ್ಯಕ್ತಿ ತನ್ನ ಎದುರು ಕುಳಿತಿರುವ ಮತ್ತೊಬ್ಬ ವ್ಯಕ್ತಿಯ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವಂತಹ ಚಿತ್ರವನ್ನು ಫೇಸ್ಬುಕ್ನಲ್ಲಿ ಅನ್ಸಾರ್ ರೋಯಲ್ ಎಂಬ ಹೆಸರಿನ ಫೇಸ್ಬುಕ್ ಖಾತೆ ಹೊಂದಿರುವ ವ್ಯಕ್ತಿ ಪೋಸ್ಟ್ ಮಾಡಿದ್ದು, ಅದನ್ನು ಆರೋಪಿ ಮೊಹಮ್ಮದ್ ಸಿದ್ದೀಕ್ ತನ್ನ ಫೇಸ್ಬುಕ್ ಖಾತೆಯಲ್ಲಿ ಹಿಂದೂ ಸಂಸ್ಕೃತಿ ಬೇಕಾ? ನಾಗಪುರದ ಹಿಂದುತ್ವ ಸಂಸ್ಕೃತಿ ಬೇಕಾ ಎನ್ನುವ ಒಕ್ಕಣೆಯೊಂದಿಗೆ ಶೇರ್ ಮಾಡಿದ್ದ.
ಜೈನಮುನಿ ಕೊಲೆ: ಇಬ್ಬರ ಬಂಧನ.!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ.
ಜುಲೈ 5ರಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿಮಹಾರಾಜರು ನಾಪತ್ತೆಯಾಗಿದ್ದರು. ಇನ್ನೂ ಈ ಕುರಿತು ಶುಕ್ರವಾರ ಮಧ್ಯಾಹ್ನ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆ ಬಗ್ಗೆ ಭಕ್ತರಿಂದ ದೂರು ದಾಖಲಾಗಿತ್ತು.ದೂರು ಸ್ವೀಕರಿಸಿದ ನಾಲ್ವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಜೈನಮುನಿ ಹತ್ಯೆ ಪ್ರಕರಣ ಬಯಲಾಗಿದೆ.
ಆರೋಪಿಗಳಿಗೆ ಜೈನಮುನಿ ಕಾಮಕುಮಾರ ನಂದಿ ಮಹಾರಾಜರುಹಣ ನೀಡಿದ್ದರು. ಅದನ್ನು ಹಣ ವಾಪಸ್ ಕೇಳಿದ್ದಕ್ಕೆ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ: ಬಸ್ಸಿನ ಗ್ಲಾಸ್ ಒಡೆದು ರೌಡಿಸಂ, ಚಾಲಕನ ಮೇಲೆ ಹಲ್ಲೆ .!
ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ಸಿನ ಗ್ಲಾಸ್ ಒಡೆದು, ಡ್ರೈವರ್ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.
ಶುಕ್ರವಾರ ಸಂಜೆ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು ಕೆಎಸ್ ಆರ್ ಟಿಸಿ ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ.
ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಭಾರೀ ಗದ್ದಲ
ಮಂಡ್ಯ ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಜಗದೀಶ್ ಎಂಬುವರು ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಕೀಯ ಟ್ವಿಸ್ಟ್ ಪಡೆದುಕೊಂಡಿದೆ.
ಇತ್ತೀಚೆಗಷ್ಟೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ವರ್ಗಾವಣೆ ಸೂಚನೆ ಪಡೆದಿದ್ದ ಜಗದೀಶ್, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಸಚಿವರೇ ಹೊಣೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಜಗದೀಶ್ ಅವರ ವರ್ಗಾವಣೆ ಆದೇಶವನ್ನು ನೀಡಲು ಸಾರಿಗೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ತಮ್ಮ ವರ್ಗಾವಣೆಗೆ ಸಚಿವರು ಆದೇಶ ನೀಡಿದ್ದಾರೆ ಎಂದು ಮೇಲಧಿಕಾರಿಗಳಿಂದ ತಿಳಿದ ಜಗದೀಶ್, ಸಚಿವ ಚಲುವರಾಯಸ್ವಾಮಿಯೇ ತನ್ನ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದು ವಿಷ ಸೇವಿಸಲು ಯತ್ನಿಸಿದ್ದಾರೆ. ಸಹೋದ್ಯೋಗಿಗಳು ಮನವೊಲಿಸಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಜಗದೀಶ್ ಆರಂಭದಲ್ಲಿ ನಿರಾಕರಿಸಿದ್ದಾರೆ. ಆದರೆ, ಅವರ ಸ್ಥಿತಿ ಹದಗೆಟ್ಟಿದ್ದರಿಂದ, ಅವರನ್ನು ಅಂತಿಮವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಕಂಡಕ್ಟ ಮೈಸೂರಿನ ಐಸಿಯುನಲ್ಲಿ ದಾಖಲಾಗಿದ್ದಾರೆ.
ನಿಂತ ಸ್ಥಳದಲ್ಲೇ ಧರೆ ಕುಸಿತ: ಓರ್ವ ಪಾರು
ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತವಾಗಿ ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ.
ಮೇಲ್ಪಾಲ್ ಮೂಲದ ಶಶಿಕುಮಾರ್ ಮನೆ ಮುಂದೆ ಧರೆ ಕುಸಿತವಾಗಿದ್ದು, ಧರೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದ ಹಿನ್ನಲೆ ಈ ಘಟನೆ ನಡೆದಿದ್ದು ಧರೆ ಕುಸಿತದ ಜಾಗದಿಂದ ತಕ್ಷಣ ಹಿಂದೆ ಬಂದಿದ್ದರಿಂದ ಅನಾಹುತ ತಪ್ಪಿದೆ.
ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ
ಆಸ್ಪತ್ರೆಯ ಕಟ್ಟಡದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಕಟ್ಟಡದ ರೂಮ್ನ ಕಿಂಡಿಯಿಂದ ನೇಣು ಬಿಗಿದುಕೊಂಡು ಹೊರಗಡೆ ಹಾರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ.
ತೀರ್ಥಹಳ್ಳಿ, ಹೊಸನಗರದಲ್ಲಿ ಹಲವು ಮನೆ ಹಾನಿ!
ಆರಿದ್ರ ಮಳೆ ಆರ್ಭಟಕ್ಕೆ ಹಲವೆಡೆ ಅನಾಹುತಗಳು ಸಂಭವಿಸಿದ್ದು ತೀರ್ಥಹಳ್ಳಿ ತಾಲೂಕಿನ ಕೆಲವೆಡೆ ಮನೆ, ಗೋಡೆ, ಜಾನುವಾರು ಕೊಟ್ಟಿಗೆಗಳಿಗೆ ಹಾನಿಯಾಗಿದೆ. ತೀರ್ಥಹಳ್ಳಿಯ ಸಾಲ್ಗಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟಗಾರು ಗ್ರಾಮದ ವಿಜಯ ವಿಠಲ ನಾಯಕ್ ಎಂಬುವರ ಮನೆ ಮೇಲೆ ಭಾರಿ ಗಾತ್ರದ ಮರ ಉರುಳಿ ಬಿದ್ದಿದ್ದು ಮನೆಗೆ ತೀವ್ರ ರೀತಿಯಲ್ಲಿ ಹಾನಿಯಾಗಿದೆ.
ಕರಾವಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್!
ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದ ಘಟನೆ ಮಂಗಳೂರಿನ ಕಾವೂರಿಲ್ಲಿ ಬೆಳಕಿಗೆ ಬಂದಿದೆ.
ಬಾಡಿಗೆ ಮನೆಯೊಂದನ್ನು ಪಡೆದ ಹಿಂದೂ ಹಾಗೂ ಅನ್ಯಕೋಮಿನ ಯುವತಿಯರು ಅನ್ಯಕೋಮಿನ ಯುವಕರ ಜೊತೆಯಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು ಎನ್ನಲಾಗಿದೆ. ಇದು ಒಂದು ವ್ಯವಸ್ಥಿತ ಲವ್ ಜಿಹಾದ್ ಎನ್ನುವ ಆರೋಪ ಕೇಳಿಬಂದಿದೆ.
ಕಾವೂರಿನ ಪೋಸ್ಟ್ ಆಫೀಸ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಹಿಂದೂ ಯುವತಿಯರು ಅನ್ಯಕೋಮಿನ ಯುವಕರ ಜೊತೆ ಮೋಜು ಮಸ್ತಿ ಮಾಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದ್ದು, ವಿಶ್ವಹಿಂದೂ ಪರಿಷತ್ ಬಜರಂಗದಳ ಮಾಹಿತಿ ಮೇರೆಗೆ ಯುವಕ- ಯುವತಿಯರನ್ನ ವಶಕ್ಕೆ ಪಡೆದ ಪೊಲೀಸರು ಮನೆಯವರನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೇರಳದಿಂದ ಬಂದ ಯುವಕ ಯುವತಿಯರು ಬಾಡಿಗೆ ಮನೆ ಪಡೆದು ಮೋಜು ಮಸ್ತಿಯಲ್ಲಿ ತೊಡಗಿದ್ದು, ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪದೇ ಪದೇ ಇಂತಹ ಪ್ರಕರಣಗಳು ಮಂಗಳೂರಿನಲ್ಲಿ ಬೆಳಕಿಗೆ ಬರುತ್ತಿವೆ ಎಂದು ವಿಶ್ವಹಿಂದೂ ಪರಿಷತ್ ಬಜರಂಗದಳ ಆಕ್ರೋಶ ವ್ಯಕ್ತ ಪಡಿಸಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ಮನೆಯವರನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷವರೆಗೆ ಸಾಲ!
HOW TO APPLY : NEET-UG COUNSELLING 2023