- ತೀರ್ಥಹಳ್ಳಿ ಕ್ಷೇತ್ರದಿಂದ ಕಿಮ್ಮನೆ ಹೆಸರು ಅಂತಿಮ
- ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದು ಅಧಿಕೃತ ಪಟ್ಟಿಯಲ್ಲಿ ಮಾಜಿ ಸಚಿವ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಹೆಸರು ಬಿಡುಗಡೆ ಮಾಡಲಾಗಿದೆ.
ರಾಜ್ಯದ 42 ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಾಗಿದ್ದು ಅಂತೂ ಕಿಮ್ಮನೆ ರತ್ನಾಕರ್ ಸ್ಥಾನ ಪಡೆದಿದ್ದಾರೆ.
ಗುರುವಾರ ತಾನೇ ತೀರ್ಥಹಳ್ಳಿ ಕ್ಷೇತ್ರದ ಇಬ್ಬರು ನಾಯಕರು ಸಭೆ ನಡೆಸಿ ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿದೆ.
ಡಿ. ಕೆ. ಶಿವಕುಮಾರ್ ಕಿಮ್ಮನೆ ಅವರಿಗೆ ಕರೆ ಮಾಡಿ ಇಬ್ಬರೂ ಸೇರಿ ಈ ಚುನಾವಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಹೇಳಿದ್ದಾರೆ. ಸಹಕಾರಿ ನಾಯಕ, ಹಾಗೂ ತೀರ್ಥಹಳ್ಳಿ ಕ್ಷೇತ್ರದ ಪ್ರಬಲ ಸಂಘಟಕ ಡಾ. ಆರ್. ಎಂ. ಮಂಜುನಾಥ ಗೌಡ ಅವರು ಕೂಡ ಒಗ್ಗಟ್ಟಿನ ಮಂತ್ರ ಜಪಿಸಿದ್ದು ಇದೀಗ ಇಡೀ ಕ್ಷೇತ್ರದ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ತಂದಿದೆ.
ಎರಡು ಬಾರಿ ಶಾಸಕರಾಗಿ, ಒಂದು ಬಾರಿ ಶಿಕ್ಷಣ ಸಚಿವರಾಗಿ ಕರ್ನಾಟಕದ ಮಾದರಿ, ಪ್ರಾಮಾಣಿಕ ರಾಜಕಾರಣಿಯಾಗಿರುವ ಕಿಮ್ಮನೆ ಹೆಸರು ಘೋಷಣೆ ಆಗಬೇಕು ಎಂದು ರಾಜ್ಯ ಮಟ್ಟದಲ್ಲಿ ಭಾರಿ ಒತ್ತಡ ವ್ಯಕ್ತವಾಗಿತ್ತು.
ಎರಡನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ, ಶಿಕಾರಿಪುರ, ಗ್ರಾಮಾಂತರ ಟಿಕೆಟ್ ಘೋಷಣೆ ಆಗಿಲ್ಲ. ಈ ಮೂಲಕ ತೀರ್ಥಹಳ್ಳಿ ರಾಜಕಾರಣ ರಂಗೇರಿದೆ.
ತೀರ್ಥಹಳ್ಳಿ ಕ್ಷೇತ್ರದ ಎರಡನೇ ಅಭ್ಯರ್ಥಿ ಘೋಷಣೆ
ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಮೊದಲು ಜೆಡಿಎಸ್ ರಾಜಾರಾಮ್ ಹೆಸರು ಘೋಷಣೆ ಮಾಡಿತ್ತು. ಇದೀಗ ಕಾಂಗ್ರೆಸ್ ಕಿಮ್ಮನೆ ರತ್ನಾಕರ್ ಅವರ ಹೆಸರು ಘೋಷಣೆ ಮಾಡಿದೆ.
ಬಿಜೆಪಿಯಿಂದ ಆರಗ ಬಹುತೇಕ ಫೈನಲ್
ತೀರ್ಥಹಳ್ಳಿಯಿಂದ ಹಾಲಿ ಶಾಸಕ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರು ಬಹುತೇಕ ಫೈನಲ್ ಆಗಲಿದೆ. ಈಗಾಗಲೇ ಜ್ಞಾನೇಂದ್ರ ಅವರು ಕೂಡ ಕ್ಷೇತ್ರದ ಹಳ್ಳಿ ಹಳ್ಳಿ ಸುತ್ತಿ ಅಭಿವೃದ್ಧಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.