Categories
ರಾಜಕೀಯ

ಮುರುಘಾಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

  • ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್ ಸಾಥ್
  • ಮುರುಘಾ ಶ್ರೀಗಳಿಂದ ರಾಹುಲ್ ಗಾಂಧಿಗೆ ಸನ್ಮಾನ

NAMMUR EXPRESS NEWS
ಚಿತ್ರದುರ್ಗ: ಸಿದ್ಧರಾಮೋತ್ಸವ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬುಧವಾರ ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ್ದಾರೆ.
ಬುಧವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಚಿತ್ರದುರ್ಗಕ್ಕೆ ಬಂದಿಳಿದ ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಏಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್. ಕಾರ್ಯಧ್ಯಕ್ಷ ಸಲೀಂ ಆಹಮ್ಮದ್, ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಡಾ.ಅರ್.ಎಂ.ಮಂಜುನಾಥಗೌಡ, ಚಿತ್ರದುರ್ಗ ಡಿಸಿಸಿ ಅಧ್ಯಕ್ಷ ತಾಜ್ ಪೀರ್, ಪಿಸಿಸಿ ಪ್ರದಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್, ಶಿವಮೊಗ್ಗ ಜಿಲ್ಲಾ ವಕ್ತಾರ ಎಂ.ರಮೇಶ್ ಶಂಕರಘಟ್ಟ ಇದ್ದರು. ಇನ್ನು ರಾಹುಲ್ ಗಾಂಧಿಗೆ ಮುರುಘಾಶ್ರೀಗಳು ಹಾರ ಶಾಲು ಹಾಕಿ ಬಸವಣ್ಣನವರ ಫೋಟೊ ನೀಡಿ ಸನ್ಮಾನಿಸಿದರು.
ರಾಹುಲ್ ಗಾಂಧಿ ಅವರು ಮಠದ ಸ್ವಾಮೀಜಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ. ನಂತರ ಸಿದ್ದರಾಮಯ್ಯ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.