- ಸಮಾರಂಭ ಮುಗಿದ ಕೂಡಲೇ ಬ್ಯಾನರ್, ಪ್ಲೆಕ್ಸ್ ತೆರವು
- ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್
NAMMUR EXPRESS NEWS
ಚಿಕ್ಕಮಗಳೂರು: ಅನುಮತಿ ಪಡೆಯದೆ ಅಳವಡಿಸಲಾದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬ್ಯಾನರ್, ಪ್ಲೆಕ್ಸ್ ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ ಪೇಂಟಿಂಗ್ ಮತ್ತು ಪೋಸ್ಟರ್ಗಳನ್ನು ತೆರವುಗೊಳಿಸುವಂತೆ ಡಿಸಿ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಾರ್ತಾ ಇಲಾಖೆಯಲ್ಲಿ ಶುಕ್ರವಾರ ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು ಧಾರ್ಮಿಕ ಸ್ಥಳಗಳನ್ನು ಸೌಹಾರ್ದ ಕದಡುವ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗದಂತೆ ಸಾರ್ವಜನಿಕರಿಗೂ ಸೂಚನೆ ನೀಡಲಾಗುತ್ತಿದೆ. ಒಂದು ವೇಳೆ ನಿಯಮ ಬಾಹಿರ ಕೃತ್ಯಗಳಲ್ಲಿ ಪಾಲ್ಗೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಇಒಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಜರುಗಿಸಬೇಕು. ರಾಜಕೀಯ ಪಕ್ಷಗಳ ಸಭೆ, ಸಮಾರಂಭದ ನಂತರ ಎರಡು ತಾಸಿನೊಳಗೆ ಬ್ಯಾನರ್, ಪ್ಲೆಕ್ಸ್ ಗಳನ್ನು ತೆರವುಗೊಳಿಸಬೇಕು. ತೆರವು ಮಾಡದಿದ್ದರೆ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ಪಿ ಉಮಾ ಪ್ರಶಾಂತ್, ಎಡಿಸಿ ಬಿ.ಆರ್.ರೂಪಾ, ಉಪ ವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ವಿನಾಯಕ್ ಸಾಗರ್ ಇತರರಿದ್ದರು.