Categories
ತೀರ್ಥಹಳ್ಳಿ ರಾಜಕೀಯ ರಾಜ್ಯ

ಆರಗ ಜ್ಞಾನೇಂದ್ರ ಅವರಿಗೆ ಮಹತ್ವದ ಹುದ್ದೆ!?

ಆರಗ ಜ್ಞಾನೇಂದ್ರ ಅವರಿಗೆ ಮಹತ್ವದ ಹುದ್ದೆ!?
– ಬಿಜೆಪಿ ಹಿರಿಯ ನಾಯಕ ಆರಗ ಜ್ಞಾನೇಂದ್ರ ದೆಹಲಿಗೆ
– ವಿರೋಧ ಪಕ್ಷ ನಾಯಕ ಅಥವಾ ಅಧ್ಯಕ್ಷರ ಹುದ್ದೆ?

NAMMUR EXPRESS NEWS
ತೀರ್ಥಹಳ್ಳಿ: ಬಿಜೆಪಿಯ ಹಿರಿಯ ನಾಯಕರು, ಸಂಘ ಪರಿವಾರದ ಪ್ರಮುಖರು, ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ದಿಢೀರ್ ದೆಹಲಿಗೆ ಬರುವಂತೆ ಸೂಚಿಸಿದ್ದು ಆರಗ ಜ್ಞಾನೇಂದ್ರ ದೆಹಲಿಗೆ ಪಯಣ ಬೆಳೆಸಿದ್ದಾರೆ. ರಾಜಕೀಯವಾಗಿ ಈ ನಡೆ ಕುತೂಹಲ ಮೂಡಿಸಿದೆ. ಬುಧವಾರ ಬೆಳಗ್ಗೆ ಶಿವಮೊಗ್ಗ ವಿಮಾನದ ಮೂಲಕ ಬೆಂಗಳೂರು ಅಲ್ಲಿಂದ ದೆಹಲಿ ಪ್ರಯಾಣ ಬೆಳೆಸಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಜ್ಞಾನೇಂದ್ರ ಅವರ ಹೆಸರು ಇದೀಗ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಆರಗ ಜ್ಞಾನೇಂದ್ರ ಹೆಸರು ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.