ರಾಜ್ಯದಲ್ಲಿ ವಿಜಯೇಂದ್ರ ಅವರಿಗೆ ಮಹತ್ವದ ಹುದ್ದೆ?!
– ಅಮಿತ್ ಶಾ ಜತೆ ದೆಹಲಿಯಲ್ಲಿ 1 ಗಂಟೆ ಚರ್ಚೆ
– ಬಿಜೆಪಿ ಅಧ್ಯಕ್ಷ ಸ್ಥಾನವೋ?, ವಿರೋಧ ಪಕ್ಷದ ನಾಯಕ ಸ್ಥಾನವೋ?
NAMMUR EXPRESS NEWS
ನವ ದೆಹಲಿ: ಕೇಂದ್ರ ಗೃಹ ಸಚಿವ, ಬಿಜೆಪಿಯ ಕಿಂಗ್ ಮೇಕರ್ ಅಮಿತ್ ಶಾ ಅವರನ್ನು ನವ ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ 1 ಗಂಟೆಗಳ ಕಾಲ ಮಾತುಕತೆ ನಡೆಸಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನವೂ ಖಾಲಿ ಇದೆ. ಇನ್ನು ವಿರೋಧ ಪಕ್ಷದ ನಾಯಕ ಸ್ಥಾನವೂ ಖಾಲಿ ಇದೆ. ಅಲ್ಲದೆ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಸಂಸದ ರಾಘವೇಂದ್ರ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಚರ್ಚೆಯೂ ಇದೆ. ಈ ನಡುವೆ ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸಂಸದರನ್ನು ಆಯ್ಕೆ ಮಾಡಬೇಕಿದೆ. ಈ ಹಿನ್ನೆಲೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಇನ್ನೊಂದು ಮೂಲಗಳ ಪ್ರಕಾರ ವಿಜಯೇಂದ್ರ ಅವರಿಗೆ ಮಹತ್ವದ ಹುದ್ದೆ ಜತೆಗೆ ಮತ್ತೆ ಬಿಜೆಪಿ ಸಂಘಟನೆ ಜವಾಬ್ದಾರಿ ಸಿಗಲಿದೆ ಎನ್ನಲಾಗಿದೆ. ವಿಧಾನ ಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಹಾಗೂ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023