- ಬಿಜೆಪಿ ಕಟ್ಟಿ ಬೆಳೆಸಿದ ನಾಯಕ ಈಗ ಯೂಟರ್ನ್
- ರಾಜೀನಾಮೆ ನೀಡುವುದಾಗಿ ಮಾಜಿ ಸಿಎಂ ಘೋಷಣೆ
NAMMUR EXPRESS NEWS
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ, ಬಿಜೆಪಿಯ ನಾಯಕ ಹಾಲಿ ಶಾಸಕ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಲ್ಲಿ ಶೆಟ್ಟರ್ ಅವರಿಗೆ ಸ್ಥಾನ ನೀಡಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನಾಯಕರಲ್ಲಿ ಶೆಟ್ಟರ್ ಅವರು ಕೂಡ ಒಬ್ಬರು. ಮಾಜಿ ಉಪಮುಖ್ಯಮಂತ್ರಿ, ಲಕ್ಷ್ಮಣ ಸವದಿ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ, ಹಾಲಿ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಭಾನುವಾರ ಬೆಳಗ್ಗೆ ಸ್ಪೀಕರ್ ಅವರಿಗೆ ಶಾಸಕ ಸ್ಥಾನದ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಮಾಜಿ ಡಿಸಿಎಂ ಲಕ್ಷಣ ಸವದಿ ಕಾಂಗ್ರೆಸ್ ಸೇರಿದ್ದಾರೆ. ಈಗ ಮತ್ತೊರ್ವ ಹಿರಿಯ ನಾಯಕ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.