Categories
ರಾಜಕೀಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಜೆಪಿ ಅಭಿನಂದನಾ ಸಮಾರಂಭ

ಶಿವಮೊಗ್ಗದಲ್ಲಿ ಬಿಜೆಪಿ ಅಭಿನಂದನಾ ಸಮಾರಂಭ

– ರಾಘವೇಂದ್ರ, ಧನಂಜಯ್ ಸರ್ಜಿ, ಬೋಜೆ ಗೌಡ ಅವರಿಗೆ ಸನ್ಮಾನ
– ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ನಾಯಕರು

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ನಗರ ವತಿಯಿಂದ ಶಿವಮೊಗ್ಗ ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಲಾಗಿತ್ತು.
ಕೃತಜ್ಞತಾ ಸಮಾರಂಭ ಹಾಗೂ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ, ಮತ್ತೊಮ್ಮೆ ಸಂಸದರಾದ ಬಿ.ವೈ ರಾಘವೇಂದ್ರ, ನೈರುತ್ಯ ಪದವೀಧರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಡಾ.ಧನಂಜಯ್ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಬೋಜೆ ಗೌಡ ಅವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಜನಪ್ರತಿನಿಧಿಗಳಿಗೆ ಅಭಿನಂದಿಸಿ, ಆತ್ಮೀಯ ಕಾರ್ಯಕರ್ತ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪನವರು, ಹಿರಿಯರಾದ ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ರಾಜ್ಯ ಪ್ರಕೋಷ್ಟಾಗಳ ಸಂಯೋಜಕರಾದ ದತ್ತಾತ್ರೇ ಮಾಜಿ ಸುಡಾ ಅಧ್ಯಕ್ಷರಾದ ಜ್ಞಾನೇಶ್ವರ್, ಎನ್ ಜಿ ನಾಗರಾಜ್ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ (ನವಲೆ ),ದೀನ್ ದಯಾಳ್, ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.