ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವಿನ ಮಾಲೆ!
– ರಾಜಸ್ಥಾನ, ಮಧ್ಯ ಪ್ರದೇಶ, ಛತ್ತಿಸ್ಘಡದಲ್ಲಿ ಗೆಲುವು
– ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ
– ತೆಲಂಗಾಣದಲ್ಲಿ ಕಾಂಗ್ರೆಸ್ ಮ್ಯಾಜಿಕ್
– ತೀರ್ಥಹಳ್ಳಿ ಸೇರಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
NAMMUR EXPRESS NEWS
ನವ ದೆಹಲಿ: ದೇಶದ ವಿವಿಧ ಕಡೆ ನಡೆದ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮೋದಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತಿಸ್ಘಡದಲ್ಲಿ ಬಿಜೆಪಿ ಗೆಲುವು ಸಾಧಿಸಿ ಸರ್ಕಾರ ರಚನೆಯಾಗಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮ್ಯಾಜಿಕ್ ಮಾಡಿದ್ದು ಬಹುಮತ ಪಡೆದಿದೆ.
ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಕರ್ನಾಟಕ ಸೇರಿ ಎಲ್ಲೆಡೆ ಸಂಭ್ರಮ ಆಚರಣೆ ಮಾಡಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಲಾಯಿತು.