ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ಸಿಗೆ?
– ಕರಾವಳಿಯಲ್ಲೂ ಕಾಂಗ್ರೆಸ್ ಆಪರೇಷನ್ ಶುರು
– ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರಿಗೆ ಹೊಣೆ
NAMMUR EXPRESS NEWS
ಬೈಂದೂರು: ಬೈಂದೂರು ಮಾಜಿ ಶಾಸಕ, ಬಿಜೆಪಿ ನಾಯಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಸನ್ನಿಹಿತವಾಗಿದೆ. ಈ ಮೂಲಕ ಕಾಂಗ್ರೆಸ್ ಕರಾವಳಿಯಲ್ಲೂ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ನಾನು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದು ಸುಕುಮಾರ್ ಶೆಟ್ಟಿ ಹೇಳಿದ್ದಾರೆ.
ಬೈಂದೂರಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನನ್ನನ್ನು ಮೂಲೆಗುಂಪು ಮಾಡಿದರು, ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ಮನಸ್ಸಿಗೆ ಆಘಾತವಾಗಿದೆ ಎಂದು ಸುಕುಮಾರ್ ಶೆಟ್ಟಿ ನೋವು ತೋಡಿಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಅವರು ಕಾಂಗ್ರೆಸ್ ಸೇರಲು ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯವರು ಹಾಗ್ ಮಾಡ್ತೀನೆ, ಹೀಗ್ ಮಾಡ್ತೇನೆ ಅಂತ ಸುಮ್ ಸುಮ್ಮೆ ಬಟಾಟೆ ಹೊಡಿತಾರೆ, ಅವರಲ್ಲಿ ಏನೂ ಮಾಡೋದಕ್ಕೆ ಆಗೋದಿಲ್ಲ. ಜನಮನವನ್ನು ಗೆಲ್ಲಲು ಸಾಧ್ಯವಿಲ್ಲ.
ಡಿಕೆ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್ ಸೇರಲು ಗ್ರೀನ್ ಸಿಗ್ನಲ್ ಕೊಟ್ಟಿದ್ದೇನೆ, ದೊಡ್ಡ ಮಟ್ಟದಲ್ಲಿ ಸಮಾರಂಭ ಮಾಡಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ. ಬೈಂದೂರಲ್ಲಿ ಪಕ್ಷ ಕಟ್ಟಿದ್ದೇನೆ, ನನ್ನನ್ನು ತುಳಿದು ಹಾಕಿದ್ದಾರೆ ಎಂದು ಸುಕುಮಾರ್ ಶೆಟ್ಟಿ ಹೇಳಿದ್ದಾರೆ.
ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಅವರು ಸುಕುಮಾರ್ ಶೆಟ್ಟಿ ಪಕ್ಷ ಸೇರ್ಪಡೆ ಉಸ್ತುವಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.