ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ: ಇನ್ಯಾರು ಲಿಸ್ಟ್ ಅಲ್ಲಿ?
– ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣಕ್ಕೆ ನಾಗೇಂದ್ರ ತಲೆದಂಡ
– ಇನ್ನು ಹಲವರು ಲಿಸ್ಟ್ ಅಲ್ಲಿ?: ಕೆಲಸ ಮಾಡದವರಿಗೆ ಗೇಟ್ ಪಾಸ್?
NAMMUR EXPRESS NEWS
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು. ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದರು. ಬಳಿಕ ಅವರು ರಾಜೀನಾಮೆ ನೀಡಿದ್ದಾರೆ.
ಇನ್ನು ಹಲವರು ಲಿಸ್ಟ್ ಅಲ್ಲಿ?
ಲೋಕಸಭಾ ಹಾಗೂ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಸಾಧ್ಯ ಆಗದ ಹಾಗೂ ಪಕ್ಷ ಸಂಘಟನೆ, ಇನ್ನು ಹಲವು ಕಾರಣಗಳಿಂದ ಅನೇಕ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.







