ಕಾಂಗ್ರೆಸ್ 17 ಮಂದಿ ಪಟ್ಟಿ ಬಿಡುಗಡೆ.!
– ಸಚಿವರ ಮಕ್ಕಳಿಗೆ ಮಣೆ: ಯಾರಿಗೆ ಟಿಕೆಟ್
– 24 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ, 4 ಮಾತ್ರ ಬಾಕಿ
– ಮೈಸೂರಿನಿಂದ ಲಕ್ಷ್ಮಣ್ ಅಚ್ಚರಿ ಅಭ್ಯರ್ಥಿ!
NAMMUR EXPRESS NEWS
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ವೆಂಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ಗೆ ಟಿಕೆಟ್ ನೀಡಿದೆ.
ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಇದೀಗ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ನಾಲ್ಕು ಕ್ಷೇತ್ರಗಳು ಮಾತ್ರ ಬಾಕಿ ಉಳಿದುಕೊಂಡಿವೆ.
ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
ಸಚಿವರ ಮಕ್ಕಳಿಗೆ ಮಣೆ
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ, ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಟಿಕೆಟ್, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಬಾಗಲಕೋಟೆ ಲೋಕಸಭಾ ಟಿಕೆಟ್ ನೀಡಲಾಗಿದೆ.
ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್ ಈ ಬಾರಿ 20 ಸ್ಥಾನಗಳ ಟಾರ್ಗೆಟ್ ಇಟ್ಟುಕೊಂಡು ಅಳೆದೂ ತೂಗಿ ಟಿಕೆಟ್ ಹಂಚಿಕೆ ನಡೆಸಿದೆ. ರಾಜ್ಯಮಟ್ಟದಲ್ಲಿ ತಲಾ ಎರಡು ಅಥವಾ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರೀಯ ಚುನಾವಣಾ ಸಮಿತಿಯನ್ನು ಮುಕ್ತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಾಕಿ ಇರುವ ಕ್ಷೇತ್ರಗಳು
ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ – ಶಿವಶಂಕರ್ ರೆಡ್ಡಿ, ವೀರಪ್ಪ ಮೊಯ್ಲಿ
ಕೋಲಾರ – ಚಿಕ್ಕಪೆದ್ದಣ್ಣ, ಎಲ್.ಹನುಮಂತಯ್ಯ
ಚಾಮರಾಜನಗರ – ಸುನೀಲ್ ಬೋಸ್, ದರ್ಶನ್ ಧ್ರುವ ನಾರಾಯಣ
ಬಳ್ಳಾರಿ – ಸೌಪರ್ಣಿಕಾ ತುಕಾರಾಂ, ವೆಂಕಟೇಶ್ ಪ್ರಸಾದ್, ವಿ.ಎಸ್. ಉಗ್ರಪ್ಪ, ತುಕಾರಾಂ ಸ್ಪರ್ಧೆ ಖಚಿತ ಎನ್ನಲಾಗಿದೆ.
ರಾಜ್ಯದಲ್ಲಿ ಯಾವಾಗ ಚುನಾವಣೆ..?
ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದ್ರೆ, ಮೇ 7 ರಂದು ಎರಡನೇ ಹಂತದ ಮತದಾನ (ಉತ್ತರ ಕರ್ನಾಟಕ) ನಡೆಯಲಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ