- ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ಇಲ್ಲ
- ಕಾಫಿ ನಾಡಿನ ಪ್ರಬಲ ಸಂಘಟಕನಿಗೆ ಒಲಿದ ಟಿಕೆಟ್
NAMMUR EXPRESS NEWS
ಚಿಕ್ಕಮಗಳೂರು : ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಎಂ.ಪಿ.ಕುಮಾರಸ್ವಾಮಿ ಕೈಬಿಟ್ಟು ಹೊಸ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡಿದೆ.
ರಾಜ್ಯದ 51 ಮೀಸಲು ಕ್ಷೇತ್ರಗಳಲ್ಲಿ ಇದು ಕೂಡ ಒಂದಾಗಿದೆ. ಮೂಡಿಗೆರೆ ಕ್ಷೇತ್ರವು ಘಟಾನುಘಟಿಗಳ ಕ್ಷೇತ್ರವಾಗಿದ್ದು ಈ ಹಿಂದೆ ಸಚಿವರಾಗಿದ್ದ ಮೋಟಮ್ಮ , ಬಿ.ಬಿ. ನಿಂಗಯ್ಯನಂತವರು ಸ್ಪರ್ಧಿಸಿರುವ ಕ್ಷೇತ್ರ ಇದಾಗಿದೆ. 2013ರಿಂದ ಮೂಡಿಗೆರೆ ಕ್ಷೇತ್ರಕ್ಕೆ ಎಂ.ಪಿ. ಕುಮಾರಸ್ವಾಮಿಯವರು ಶಾಸಕರಾಗಿದ್ದಾರೆ. ಆದರೆ ಕಳೆದ ಹತ್ತು ವರ್ಷಗಳಿಂದ ಹೇಳಿಕೊಳ್ಳುವಂತಹ ಅಭಿವೃದ್ದಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿಲ್ಲ ಎಂಬುವುದು ಇಲ್ಲಿನ ಸಾರ್ವಜನಿಕರ ಅಭಿಪ್ರಾಯವಾಗಿದೆ. 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಹೊಸ ಮುಖ ಕ್ಷೇತ್ರಕ್ಕೆ ಬೇಕು ಎಂಬ ಧ್ವನಿ ಇತ್ತೀಚಿನ ದಿನಗಳಲ್ಲಿ ಕ್ಷೇತ್ರದ ಜನರಲ್ಲಿ ಕೇಳಿ ಬರುತ್ತಿದ್ದು ಇದೀಗ ದೀಪಕ್ ದೊಡ್ಡಯ್ಯ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.
ಬಡ ಕುಟುಂಬದಿಂದ ಬಂದ ದೀಪಕ್ ದೊಡ್ಡಯ್ಯ ಅವರ ತಂದೆ ಮೂಲತಃ ಬೇಲೂರು ತಾಲ್ಲೂಕಿನ ಗೆಂಡೇಹಳ್ಳಿಯವರು ಆರೋಗ್ಯ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಶಾಲೆಯ ವಿದ್ಯುತ್ ದೀಪದ ಬೆಳಕಿನಲ್ಲೇ ಓದಿ ಬೆಳೆದ ಶ್ರಮಜೀವಿ, ದೀಪಕ್ ದೊಡ್ಡಯ್ಯ ಶಾಲಾ ದಿನಗಳನ್ನು ಚಿಕ್ಕಮಗಳೂರಿನಲ್ಲೇ ಮುಗಿಸಿ ನಂತರ ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ಸೀಟಿಗಾಗಿ ಪ್ರಯತ್ನಿಸಿದರೂ ಕೂಡ ಅಲ್ಲಿನ ಕೆಲವು ಗೊಂದಲಗಳಿಂದ ಅನಿವಾರ್ಯವಾಗಿ ಚಿಕ್ಕಮಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಪಿಯಿಸಿ ಮುಗಿಸಿದರು. ನಂತರ ಇಂಜಿನಿಯರಿಂಗ್ ಪದವಿಯನ್ನು ಚಿಕ್ಕಮಗಳೂರಿನ ಎಐಟಿ ಕಾಲೇಜಿನಲ್ಲಿ ಪೂರೈಸಿದ ಅವರ ಪದವಿ ಮುಗಿಯುದಕ್ಕಿಂತ ಮೊದಲೇ ಮೂಡಿಗೆರೆ ತಾಲೂಕಿನ ಜಾವಳಿ ದೂರಸಂಪರ್ಕ ಇಲಾಖೆಯಲ್ಲಿ
ಕೆಲಸ ಗಿಟ್ಟಿಸಿಕೊಂಡರು. ನಂತರ ಮೂಡಿಗೆರೆಗೆ ವರ್ಗಾವಣೆಯಾದರು ವರ್ಗಾವಣೆಯಾದ ಬಳಿಕ ಇವರ ರಾಜಕೀಯ ಜೀವನಕ್ಕೆ ಹೊಸ ಬೆಳಕನ್ನು ಚೆಲ್ಲಿತು. ನಂತರ ಮೂಡಿಗೆರೆಯಲ್ಲಿ ಜೇಸಿ ಗೆಳಯರ ಬಳಗದ ಸಂಪರ್ಕಕ್ಕೆ ಬಂದ ಇವರು ಮೂಡಿಗೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದರು. 1994ರಲ್ಲೇ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದರು. 1994ರಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟ ಇವರು 1995 ಗ್ರಾಮೀಣ ಭಾಗದ ವಿದ್ಯಾರ್ಥಿಗಳಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ಯುರೇಕಾ ಎಂಬ ಅಕಾಡೆಮಿಯನ್ನು ಸ್ಥಾಪಿಸಿದರು.
ಒಂದು ಕಾಲದಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಬೆಂಗಳೂರು ಅಥವಾ ಮಂಗಳೂರಿಗೆ ಹೋಗಬೇಕಾಗಿತ್ತು, ಆದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಆಸಕ್ತಿಯಿದ್ದ ದೀಪಕ್ ದೊಡ್ಡಯ್ಯ ಅವರು ವಿದ್ಯಾರ್ಥಿಗಳಿಗೆ ಅನೂಕೂಲವಾಗುವಂತೆ ಚಿಕ್ಕಮಗಳೂರಿನಲ್ಲಿ ಯುರೇಕಾ ಅಕಾಡೆಮಿ ಸಂಸ್ಥೆಯನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಿಇಟಿ, ಐಎಸ್ಎಸ್, ಐಪಿಎಸ್, ಶಿಕ್ಷಕರು , ಎಫ್ಡಿಎ, ಎಸ್ಡಿಎಯಂತಹ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ ಲಕ್ಷಾಂತರ ವಿದ್ಯಾರ್ಥಿಗಳು ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗುವಂತೆ ಮಾಡಿದ್ದಾರೆ. ಇಲ್ಲಿ ಓದಿದ 450ಕ್ಕೂ ಅಧಿಕ ಮಂದಿ ಸರ್ಕಾರಿ ನೌಕರಿಯಲ್ಲಿದ್ದಾರೆ ಇವರ ಈ ಸಂಸ್ಥೆಯಲ್ಲಿ ವರ್ಷಕ್ಕೆ 1500 ಕ್ಕೂ ಅಧಿಕ ಮಂದಿ ವ್ಯಾಸಂಗ ಮಾಡುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ರೋಟರಿ ಸಂಸ್ಥೆಯ ಅಂಗಸಂಸ್ಥೆಯಾದ ರೂಟ್ರಾಕ್ ಸಂಸ್ಥೆಯಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ನಂತರ ರೋಟರಿ, ಕನ್ನಡ ಸಂಘಟನೆ, ಜಾನಪದ ಪರಿಷತ್, ವಿಜ್ಞಾನ ಪರಿಷತ್ ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಾಹಿತ್ಯ ಸಂಸ್ಕೃತಿಯಲ್ಲೂ ಅಪಾರ ಆಸಕ್ತಿ ಇರುವ ಇವರು ಸತತ ಹತ್ತು ವರ್ಷಗಳಿಂದ ತಿಂಗಳ ಪ್ರತಿ ಎರಡನೇ ಶನಿವಾರ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿ ಜನಕ್ಕೆ ಮನರಂಜನೆ ನೀಡುತ್ತಿದ್ದಾರೆ.
ಭಾರತೀಯ ಜನತಾ ಪಾರ್ಟಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದದಿಂದ 3 ಬಾರಿ ಟಿಕೆಟ್ ವಂಚಿತವಾಗಿರುವ ಇವರು ಪ್ರಸ್ತುತ ಬಿಜೆಪಿ ಜಿಲ್ಲಾ ವಕ್ತಾರರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. 2 ಬಾರಿ ಕೊನೆಯ ಕ್ಷಣದಲ್ಲಿ ಟಿಕೆಟ್ ವಂಚಿತರಾಗಿರುವ ಇವರಿಗೆ ಈ ಬಾರಿ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳಿದೆ. ಸುವಾರು 30 ವರ್ಷಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿರುವ ಇವರು ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಉತ್ಸುಕರಾಗಿದ್ದಾರೆ. ಮೂಡಿಗೆರೆಯನ್ನು ಶೈಕ್ಷಣಿಕವಾಗಿ ಉನ್ನತ ಸ್ಥಾನಕ್ಕೆ ಏರಿಸುವ ಮಹದಾಸೆ ಇವರಿಗಿದ್ದು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಮೂಡಿಗೆರೆಯನ್ನು ಒಂದು ಮಾದರಿ ಕ್ಷೇತ್ರವನ್ನಾಗಿಸುವ ಕನಸು ಇವರಿಗಿದೆ. ಇದರ ಜೊತೆಗೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ಗುರಿಯನ್ನು ದೀಪಕ್ ದೊಡ್ಡಯ್ಯ ಹೊಂದಿದ್ದಾರೆ. ಜಿಲ್ಲೆಯಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಉದ್ಯೋಗವನ್ನು ಸೃಷ್ಠಿಸುವ ಜೊತೆಗೆ ಸ್ವ ಉದ್ಯೋಗಕ್ಕೆ ತರಬೇತಿಯನ್ನು ನೀಡುವ ಗುರಿ ಹೊಂದಿದ್ದಾರೆ. ವಿದ್ಯಾವಂತ ಹಾಗೂ ಭಾಷಾ ಪ್ರವೀಣ ಆಗಿರುವ ಇವರು ಪ್ರಧಾನ ಮಂತ್ರಿ ಕೇಂದ್ರ ಸಲಹಾ ಸಮಿತಿ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಇವರು , ವಿಧಾನಸಬಾ ಕ್ಷೇತ್ರದ ಚುನಾವಣೆಗೆ ಮೂಡಿಗೆರೆ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದು ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ. ಚಿಕ್ಕಮಗಳೂರು ಜಿಲ್ಲೆ ಪೈಕಿ ಹೊಸ ಅಭ್ಯರ್ಥಿ ಇವರಾಗಿದ್ದಾರೆ.