Categories
ರಾಜಕೀಯ ರಾಜ್ಯ ಶಿವಮೊಗ್ಗ

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯ ಏರುಪೇರು

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯ ಏರುಪೇರು
– ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು: ರಾಜ್ಯ ಕಂಡ ಅಪ್ರತಿಮ ನಾಯಕ

NAMMUR EXPRESS NEWS
ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ತಕ್ಷಣವೇ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಈಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬದವರು ಶಿವಮೊಗ್ಗಕ್ಕೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದು ಬಂದಿದೆ. ವಿಧಾನಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ ಹಾಗು ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.