ಮತ್ತೆ ಬಿಜೆಪಿಗೆ ಜಂಪ್ ಮಾಡಿದ ಶೆಟ್ಟರ್!
– ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ: ಬಿಜೆಪಿ ಸೇರ್ಪಡೆ
– ಮೋದಿ ಮತ್ತೆ ಪ್ರಧಾನಿ ಆಗ್ಬೇಕು ಎಂದ ಶೆಟ್ಟರ್
NAMMUR EXPRESS NEWS
ನವ ದೆಹಲಿ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದ ನಂತರ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಚುನಾವಣೆ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 9 ತಿಂಗಳು ಬಳಿಕ ಮತ್ತೆ ಮಾತೃ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ರಾಜೀನಾಮೆ ನೀಡಿದ್ದೆ. ಕಾಂಗ್ರೆಸ್ ಗೆ ಸೇರಿದ್ದೆ. ನನ್ನನ್ನು 8-9 ತಿಂಗಳಿಂದ ಬಿಜೆಪಿಗೆ ಕರೆ ತರಲು ಬಿಜೆಪಿ ನಾಯಕರು ಬಹಳಷ್ಟು ಪ್ರಯತ್ನ ಮಾಡಿದ್ದರು. ಈಗ ದೇಶದ ಹಿತದೃಷ್ಠಿಯಿಂದ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಇದರಿಂದಾಗಿ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ನಾನು ಪರಿಷತ್ ಸ್ಥಾನಕ್ಕೆ ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ನಂತರ ಸಮಕ್ಷಮ ಡಿಕೆಶಿ ಭೇಟಿಯಾಗಿ ರಾಜೀನಾಮೆ ಸಲ್ಲಿಸುವೆ. ನರೇಂದ್ರ ಮೋದಿ ಮೊತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ ಎಂದ ಶೆಟ್ಟರ್ ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾದ ದಿನದಿಂದಲೂ ಕಾಂಗ್ರೆಸ್ ನಾಯಕರು ನನಗೆ ಗೌರವ ಸ್ಥಾನಮಾನ ನೀಡಿ ಗೌರವದಿಂದ ನಡೆದುಕೊಂಡಿದ್ದಾರೆ. ಈ ಸಹಕಾರಕ್ಕೆ ಸಿಎಂ ಮತ್ತು ಡಿಸಿಎಂಗೆ ಧನ್ಯವಾದ ಸಲ್ಲಿಸುವೆ ಎಂದು ಹೇಳಿದರು. ಮುಂದುವರೆದು, ಇಂದು ಅಮಿತ್ ಶಾ ಅವರನ್ನು ಕೂಡ ಭೇಟಿ ಮಾಡಿದ್ದೆ. ಅವರು ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಇದೀಗ ನಡ್ಡಾ ಅವರನ್ನು ಕೂಡ ಭೇಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.