Categories
ರಾಜಕೀಯ ರಾಜ್ಯ

ಬಿಜೆಪಿ ರಾಜ್ಯ ಅಧ್ಯಕ್ಷ ಹುದ್ದೆಗೆ ಕಟೀಲ್ ಗುಡ್ ಬೈ!

ಬಿಜೆಪಿ ರಾಜ್ಯ ಅಧ್ಯಕ್ಷ ಹುದ್ದೆಗೆ ಕಟೀಲ್ ಗುಡ್ ಬೈ!

– 2 ಅವಧಿ ಪೂರೈಸಿದ ಚಾಣಾಕ್ಯನ ರಾಜೀನಾಮೆ
– ಸೋಮಣ್ಣ ಅಧ್ಯಕ್ಷರಾಗ್ತಾರಾ? ಬೇರೆಯವರಿಗೆ ಸ್ಥಾನ?

NAMMUR EXPRESS NEWS
ಬಳ್ಳಾರಿ: ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.