ರಾಜ್ಯದಲ್ಲಿ ರಂಗೇರಿದ ಲೋಕಸಭಾ ಚುನಾವಣೆ..!
– ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್ ಮೈತ್ರಿ
– ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನವೇ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ
NAMMUR EXPRESS NEWS
ಬೆಂಗಳೂರು : ಕರ್ನಾಟಕದಲ್ಲಿ ಮಾರ್ಚ್ 28 ರಿಂದ ಲೋಕಸಭಾ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಮೊದಲ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಕೆ ಕೂಡ ಆರಂಭವಾಗಿದೆ. ಇದರ ನಡುವೆ ಶತಾಯಗತಾಯ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಪಣತೊಟ್ಟು ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿವೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನ ಎಲ್ಲ ಕ್ಷೇತ್ರಗಳಿಗೂ ಉಮೇದುವಾರರನ್ನು ಘೋಷಿಸಿವೆ. ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಕಾಂಗ್ರೆಸ್ಗಿಂತ ಒಂದು ಹೆಜ್ಜೆ ಮುಂದೆ ಇವೆ. ಕಾಂಗ್ರೆಸ್ ಇನ್ನೂ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಮೊದಲ ಹಂತದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಬಿಜೆಪಿ, ಆಮೇಲೆ ನಾಲ್ಕು ಕ್ಷೇತ್ರಗಳಿಗೆ ಹಾಗೂ ಬುಧವಾರ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಹಾಸನಕ್ಕೆ ಪ್ರಜ್ವಲ್ ರೇವಣ್ಣ ಹೆಸರು ಮೊದಲೇ ಘೋಷಣೆಯಾಗಿದ್ದರು ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಟಿಕೆಟ್ ಘೋಷಣೆಯ ಸಸ್ಪೆನ್ಸ್ ಅನ್ನು ಜೆಡಿಎಸ್ ಕಾಯ್ದಿರಿಸಿಕೊಂಡಿತ್ತು. ಕೋಲಾರ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕೂಡ ಬದಲಾವಣೆ ಮಾಡಿರುವ ಜೆಡಿಎಸ್ ಕಾಂಗ್ರೆಸ್ ಗಲಾಟೆಯ ಲಾಭ ಪಡೆಯಲು ಯತ್ನಿಸಿದೆ. ಇಲ್ಲಿ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬ 28 ಕ್ಷೇತ್ರಗಳ ಪಟ್ಟಿ ಇದೆ.
ಚಿಕ್ಕೋಡಿ – ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿ – ಜಗದೀಶ್ ಶೆಟ್ಟರ್, ಬಾಗಲಕೋಟೆ – ಪಿಸಿ ಗದ್ದಿಗೌಡರ್ ಬಿಜಾಪುರ – ರಮೇಶ್ ಜಿಗಜಿಣಗಿ, ಕಲಬುರಗಿ – ಡಾ ಉಮೇಶ್ ಜಾಧವ್, ರಾಯಚೂರು – ರಾಜಾ ಅಮರೇಶ್ವರ ನಾಯಕ, ಬೀದರ್ – ಭಗವಂತ್ ಖೂಬಾ, ಕೊಪ್ಪಳ – ಡಾ. ಬಸವರಾಜ್ ಕ್ಯಾವಟೂರು, ಬಳ್ಳಾರಿ – ಶ್ರೀರಾಮುಲು, ಹಾವೇರಿ – ಬಸವರಾಜ ಬೊಮ್ಮಾಯಿ, ಧಾರವಾಡ ಪ್ರಹ್ಲಾದ್ ಜೋಶಿ, ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ, ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್, ಶಿವಮೊಗ್ಗ – ಬಿವೈ ರಾಘವೇಂದ್ರ, ಉಡುಪಿ – ಚಿಕ್ಕಮಗಳೂರು – ಕೋಟ ಶ್ರೀನಿವಾಸ್ ಪೂಜಾರಿ, ಹಾಸನ – ಪ್ರಜ್ವಲ್ ರೇವಣ್ಣ (ಜೆಡಿಎಸ್), ದಕ್ಷಿಣ ಕನ್ನಡ ಕ್ಯಾ. ಬ್ರಿಜೇಶ್ ಚೌಡ, ಚಿತ್ರದುರ್ಗ – ಗೋವಿಂದ ಕಾರಜೋಳ, ತುಮಕೂರು – ವಿ ಸೋಮಣ್ಣ, ಮಂಡ್ಯ – ಎಚ್ಡಿ ಕುಮಾರಸ್ವಾಮಿ (ಜೆಡಿಎಸ್), ಮೈಸೂರು – ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ಚಾಮರಾಜನಗರ – ಎಸ್ ಬಾಲರಾಜ್
ಬೆಂಗಳೂರು ಗ್ರಾಮಾಂತರ – ಡಾ ಸಿ ಎನ್ ಮಂಜುನಾಥ್, ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರ – ಪಿಸಿ ಮೋಹನ್, ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ, ಚಿಕ್ಕಬಳ್ಳಾಪುರ – ಡಾ ಕೆ ಸುಧಾಕರ್, ಕೋಲಾರ – ನಿಸರ್ಗ ನಾರಾಯಣಸ್ವಾಮಿ (ಜೆಡಿಎಸ್).