Categories
ರಾಜಕೀಯ ರಾಜ್ಯ ರಾಷ್ಟ್ರೀಯ ವಾರ್ತೆ

ಮೋದಿ ಮತ್ತೊಮ್ಮೆ: ಶ್ವಾನ ಭವಿಷ್ಯ..!

ಮೋದಿ ಮತ್ತೊಮ್ಮೆ: ಶ್ವಾನ ಭವಿಷ್ಯ..!
– ಮೈಸೂರು – ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಗೆಲುವು
– ಎಲ್ಲೆಡೆ ಶ್ವಾನ ಭವಿಷ್ಯ ವೈರಲ್: ಏನಿದು ಸ್ಟೋರಿ…?

NAMMUR EXPRESS NEWS
ಮೈಸೂರು : ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ಗೆಲುವು- ಸೋಲುಗಳ ಲೆಕ್ಕಾಚಾರ ಶುರುವಾಗಿದೆ. ಎಕ್ಸಿಟ್ ಪೋಲ್ ಬಿಡುಗಡೆಯಾಗಿ ಸದ್ದು ಮಾಡಿರುವ ಬೆನ್ನಲ್ಲೇ ಶ್ವಾನವೊಂದು ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಕೆ ಸಿ ಸ್ಟ್ರೀಟ್‌ ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ ಶ್ವಾನ ಈ ಬಾರಿ ನರೇಂದ್ರ ಮೋದಿ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದೆ. ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಫೋಟೋ ಇಟ್ಟಾಗ ಅದು ಮೋದಿ ಫೋಟೋವನ್ನು ಆಯ್ಕೆ ಮಾಡುವ ಮೂಲಕ ಫಲಿತಾಂಶದ ಭವಿಷ್ಯ ನುಡಿದಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಎಂ.ಲಕ್ಷ್ಮಣ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಫೋಟೋ ಇಟ್ಟಾಗ ಯದುವೀರ್ ಫೋಟೋವನ್ನು ಆಯ್ಕೆ ಮಾಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಗರು, ನಾಯಕರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಹಲವಾರು ಕಾರ್ಯಕ್ಕೆ ಈ ರೀತಿ ಭೈರವನ ಬಳಿ ಭವಿಷ್ಯ ಕೇಳಲಾಗಿತ್ತು. ಶ್ವಾನ ನುಡಿದ ಭವಿಷ್ಯದಂತೆ ಆಗಿತ್ತು. ಆ ಕಾರಣದಿಂದ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ. ಜೊತೆಗೆ ಮೈಸೂರು – ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರು ಗೆದ್ದು ಬೀಗುತ್ತಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.