- ಕರೋನಾ ವಿಶೇಷ ಪ್ಯಾಕೇಜ್ ಕಟ್
- ರಾಜ್ಯದ ಯೋಜನೆ ಮಾತ್ರ ಜಾರಿ
ನವ ದೆಹಲಿ: ಗರೀಬ್ ಕಲ್ಯಾಣ್ ಯೋಜನೆಯಡಿ ಕರೋನಾ ತುರ್ತು ಹಿನ್ನಲೆ ಕಳೆದ ಏಳು ತಿಂಗಳಿನಿಂದ ಕೇಂದ್ರವು ಪಡಿತರ ಚೀಟಿದಾರರಿಗೆ ನೀಡುತ್ತಿದ್ದ ಉಚಿತ ಅಕ್ಕಿ, ಬೇಳೆ ಇನ್ನು ಇಲ್ಲ.
ಕೊರೋನದಿಂದಾದ ಉದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ನಿಂದ ಪಡಿತರ ಚೀಟಿ ಹೊಂದಿರುವ ರಾಜ್ಯದ ಎಲ್ಲ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿ ಮತ್ತು ಕುಟುಂಬವೊಂದಕ್ಕೆ 1 ಕೆಜಿ ಕಡಲೆಕಾಳನ್ನು ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಯೋಜನೆಯಡಿ ವಿತರಿಸುತ್ತಿತ್ತು.
ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ಮತ್ತು ಕುಟುಂಬಕ್ಕೆ ತಲಾ 2 ಕೆಜಿ ಗೋಧಿ, 1ಕೆಜಿ ಕಡಲೆಕಾಳು ಲಭ್ಯವಾಗುತ್ತಿತ್ತು. ಇದೀಗ ಕೇಂದ್ರ ಸರ್ಕಾರದ ಆದೇಶದಂತೆ ಇದು ನವೆಂಬರ್ ಅಂತ್ಯಕ್ಕೆ ಕೊನೆಗೊಂಡಿದೆ.
ಡಿಸೆಂಬರ್ನಿಂದ ಅಂತ್ಯೋದಯ ಪಡಿತರ ಕಾರ್ಡ್ ಹೊಂದಿರುವ ಕುಟುಂಬಕ್ಕೆ 30 ಕೆಜಿ ಅಕ್ಕಿ, 2 ಕೆಜಿ ಗೋಧಿ ಹಾಗೂ ಬಿಪಿಎಲ್ ಪಡಿತರ ಚೀಟಿ ಫಲಾನುಭವಿಗೆ ತಲಾ 5 ಕೆಜಿ ಅಕ್ಕಿ ಮತ್ತು ಕುಟುಂಬಕ್ಕೆ ಎರಡು ಕೆಜಿ ಗೋಧಿ ಸಿಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೇಳಿದೆ.