- 2024ಕ್ಕೂ ಮೋದಿ ಸಾರಥಿ: ಅಮಿತ್ ಶಾ ಘೋಷಣೆ
- ಅಮಿತ್ ಷಾ, ಅರುಣ್ ಸಿಂಗ್ ಘೋಷಣೆ
NAMMUR EXPRESS NEWS
ನವ ದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿಯಾಗಲಿದ್ದಾರೆ.
ಬಿಜೆಪಿ ಕೇಂದ್ರ ಸಮಿತಿ ಇದನ್ನು ಸ್ಪಷ್ಟಪಡಿಸಿದೆ.
ಗೃಹ ಸಚಿವ ಅಮಿತ್ ಶಾ ಭಾನುವಾರ ಪಾಟ್ನಾದಲ್ಲಿ ಮಾತನಾಡಿ ಮೋದಿ ನೇತೃತ್ವದಲ್ಲಿ ಲೋಕ ಸಭಾ ಚುನಾವಣೆ ನಡೆಯಲಿದೆ ಎಂದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, 2024ರ ಲೋಕಸಭೆ ಮತ್ತು 2025ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಹೋರಾಡಲಿದೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
2024ರ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದ್ದು, ನರೇಂದ್ರ ಮೋದಿ ಅವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. 2024ರಲ್ಲಿ ಹಾಗೂ 2025ರಲ್ಲಿ ಬಿಹಾರದಲ್ಲಿ ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ಸಹ ಒಂದು. ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ ಈ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ. ಈಗಾಗಲೇ 90 ಆವೃತ್ತಿಗಳನ್ನು ಯಶ್ವಸಿಯಾಗಿ ಪೂರೈಸಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. 91 ನೇ ಮನ್ ಕೀ ಬಾತ್ ಕಾರ್ಯಕ್ರಮ ಸೋಮವಾರ ನಡೆದಿದೆ.